ಆ್ಯಪ್ನಗರ

ಬೆಂಗಳೂರು ದಕ್ಷಿಣ ಅಥವಾ ಉತ್ತರದಿಂದ ಸುಮಲತಾ ಅಂಬರೀಶ್ ಕಣಕ್ಕೆ?

ಸುಮಲತಾ ಅಂಬರೀಶ್‌ ಅವರನ್ನು ಬೆಂಗಳೂರು ಉತ್ತರ ಅಥವಾ ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್‌ ನಾಯಕರು ಇನ್ನೂ ಪ್ರಯತ್ನ ನಡೆಸಿದ್ದಾರೆ.

Vijaya Karnataka 2 Mar 2019, 7:58 am
ಬೆಂಗಳೂರು: ದೋಸ್ತಿಗಳಿಗೆ ಸವಾಲೆಸೆದಿರುವ ಸುಮಲತಾ ಅಂಬರೀಶ್‌ ಮನವೊಲಿಸುವ ಕಸರತ್ತನ್ನು ಕಾಂಗ್ರೆಸ್‌ ಮುಂದುವರಿದಿದೆ. ಅವರನ್ನು ಬೆಂಗಳೂರು ಉತ್ತರ ಅಥವಾ ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್‌ ನಾಯಕರು ಇನ್ನೂ ಪ್ರಯತ್ನ ನಡೆಸಿದ್ದಾರೆ.
Vijaya Karnataka Web sumalata


ಈ ಬಗ್ಗೆ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ''ಬೆಂಗಳೂರು ದಕ್ಷಿಣ ಅಥವಾ ಬೆಂಗಳೂರು ಉತ್ತರದಲ್ಲಿ ಸುಮಲತಾ ಸ್ಪರ್ಧಿಸುತ್ತಾರೊ ಇಲ್ಲವೊ ಎನ್ನುವುದು ಪಕ್ಷದ ಆಂತರಿಕ ವಿಚಾರ,'' ಎಂದರು.

ಮಂಡ್ಯ ಕ್ಷೇತ್ರದ ವಿಚಾರದಲ್ಲಿ ಜವಾಬು ನೀಡಿದ ಅವರು, ''ಕ್ಷೇತ್ರ ಹಂಚಿಕೆಯಿನ್ನೂ ಆಗಿಲ್ಲ. ಯಾರಿಗೆ ಟಿಕೆಟ್‌ ನೀಡಬೇಕು ಎನ್ನುವುದೂ ಅಂತಿಮಗೊಂಡಿಲ್ಲ. ಮಾರ್ಚ್‌ 4 ರಂದು ಸಮನ್ವಯ ಸಮಿತಿ ಸಭೆಯಿದ್ದು, ಸೀಟು ಹೊಂದಾಣಿಕೆ ಬಗ್ಗೆ ಸಮಾಲೋಚನೆಯಾಗಲಿದೆ. ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎಂಬ ಬಗ್ಗೆಯೂ ಈಗಲೇ ಏನೂ ಹೇಳುವಂತಿಲ್ಲ,'' ಎಂದರು.

ಬಿಜೆಪಿ ನಾಯಕರು ಎಲ್ಲವನ್ನೂ ಸ್ವಾರ್ಥ ದೃಷ್ಟಿಯಿಂದ ನೋಡುತ್ತಾರೆ. ಅವರು ಎಲ್ಲವನ್ನೂ ಬಿಟ್ಟವರಾಗಿದ್ದಾರೆ. ಸೇನೆಯ ವಿಚಾರದಲ್ಲೂ ರಾಜಕೀಯ ಮಾಡುತ್ತಾರೆ. ಜತೆಗೆ ಯಡಿಯೂರಪ್ಪ ಹೇಳಿಕೆಯನ್ನೂ ಸಮರ್ಥಿಸಿಕೊಳ್ಳುತ್ತಾರೆ. ಇಂತಹ ಕೀಳು ಮಟ್ಟದ ರಾಜಕೀಯದಿಂದಲೇ ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ತರಾಟೆಗೆ ತೆಗೆದುಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ