ಆ್ಯಪ್ನಗರ

ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಅರ್ಜಿ ಆಹ್ವಾನ

2019ರ ಫೆ...

Vijaya Karnataka 2 Dec 2018, 5:00 am
ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಕೆಎಆರ್‌ಟಿಇಟಿ) ಅರ್ಜಿ ಆಹ್ವಾನಿಸಲಾಗಿದ್ದು, 2019ರ ಫೆ.3ರಂದು ಪರೀಕ್ಷೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
Vijaya Karnataka Web teacher


ಪರೀಕ್ಷೆಗೆ ಡಿ.5ರಿಂದ 25ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಶುಲ್ಕ ಪಾವತಿಸಲು ಡಿ.27 ಕೊನೆಯ ದಿನಾಂಕವಾಗಿದೆ. ಪ್ರವೇಶ ಪತ್ರಗಳನ್ನು 2019ರ ಜ.23ರಿಂದ ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.

ನೇಮಕ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ಮಾನದಂಡಗಳನ್ನು ಅನಸುರಿಸುವುದು, ಶಿಕ್ಷಕರ ಗುಣಮಟ್ಟ ಹೆಚ್ಚಿಸುವುದು, ಶಿಕ್ಷಕ, ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಶಿಕ್ಷಣಾರ್ಥಿಗಳ ಕಾರ್ಯಕ್ಷಮತೆ ಸುಧಾರಣೆಗೆ ಈ ಪರೀಕ್ಷೆ ಸಹಕಾರಿಯಾಗಲಿದೆ.

ಒಟ್ಟು ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ. ಒಂದರಿಂದ 5ನೇ ತರಗತಿವರೆಗೆ ಬೋಧನೆ ಮಾಡುವ ಶಿಕ್ಷಕರಿಗೆ (ಪತ್ರಿಕೆ-1) ಫೆ.3ರ ಭಾನುವಾರ ಬೆಳಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. 6ರಿಂದ 8ನೇ ತರಗತಿ ವರೆಗೆ ಬೋಧನೆ ಮಾಡುವ ಶಿಕ್ಷಕರಿಗೆ (ಪತ್ರಿಕೆ-2) ಮಧ್ಯಾಹ್ನ 2 ಗಂಟೆಯಿಂದ 4.30ರ ವರೆಗೆ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಆಪೇಕ್ಷಿಸಿದಲ್ಲಿ ಎರಡೂ ಪರೀಕ್ಷೆಗಳಿಗೆ ಹಾಜರಾಗಬಹುದು. ಎರಡು ಪತ್ರಿಕೆಗಳಿಂದ ತಲಾ 150 ಅಂಕಗಳಿಗೆ ಬಹು ಆಯ್ಕೆ ಪ್ರಶ್ನೆಗಳಿರುತ್ತವೆ. ಅರ್ಜಿಗಳನ್ನು ಇಲಾಖೆಯ ವೆಬ್‌ಸೈಟ್‌ ಡಿಡಿಡಿ.s್ಚhಟಟ್ಝಛಿd್ಠ್ಚaಠಿಜಿಟ್ಞ.ka್ಟ.್ಞಜ್ಚಿ.ಜ್ಞಿ ಮೂಲಕ ಸಲ್ಲಿಸುವಂತೆ ಕೋರಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ