ಆ್ಯಪ್ನಗರ

ಉಡುಪಿ ಕಾಲೇಜು ಸ್ಕಾರ್ಫ್ ವಿವಾದ; ಡ್ರೆಸ್ ಕೋಡ್ ಕುರಿತಾಗಿ ಸರ್ಕಾರದಿಂದ ಸುತ್ತೋಲೆ ಸಾಧ್ಯತೆ!

ಹಿಜಾಬ್ ವಿವಾದಕ್ಕೆ ಸೋಮವಾರ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಶಾಲಾ ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಕುರಿತಾದ ಸುತ್ತೋಲೆ ಹೊರಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕಾಲೇಜುಗಳಲ್ಲಿ ಯಾವ ರೀತಿ ಸಮವಸ್ತ್ರ ನಿಯಮವನ್ನು ಪಾಲನೆ ಮಾಡಬೇಕು ಎಂಬ ನಿಟ್ಟಿನಲ್ಲಿ ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ಅಧಿಕೃತವಾಗಿ ಶಿಕ್ಷಣ ಇಲಾಖೆಯಿಂದ ಈ ಕುರಿತು ಸುತ್ತೋಲೆ ಹೊರಡಿಸುವ ಸಾಧ್ಯತೆ ಇದೆ.

Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 24 Jan 2022, 11:15 am
ಬೆಂಗಳೂರು: ಉಡುಪಿ ಸರ್ಕಾರಿ ಕಾಲೇಜಿನಲ್ಲಿ ತಲೆ ಎತ್ತಿರುವ ಸ್ಕಾರ್ಫ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆ ಇದೆ. ಉಡುಪಿ ವಿವಾದ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಲಿದ್ದಾರೆ.
Vijaya Karnataka Web basavaraj bommai


ಹಿಜಾಬ್ ವಿವಾದಕ್ಕೆ ಸೋಮವಾರ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಶಾಲಾ ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಕುರಿತಾದ ಸುತ್ತೋಲೆ ಹೊರಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕಾಲೇಜುಗಳಲ್ಲಿ ಯಾವ ರೀತಿ ಸಮವಸ್ತ್ರ ನಿಯಮವನ್ನು ಪಾಲನೆ ಮಾಡಬೇಕು ಎಂಬ ನಿಟ್ಟಿನಲ್ಲಿ ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ಅಧಿಕೃತವಾಗಿ ಶಿಕ್ಷಣ ಇಲಾಖೆಯಿಂದ ಈ ಕುರಿತು ಸುತ್ತೋಲೆ ಹೊರಡಿಸುವ ಸಾಧ್ಯತೆ ಇದೆ. ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಆರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ತರಗತಿಗೆ ಹಾಜರಾಗಿದ್ದರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು.
ತೀರ್ಥಹಳ್ಳಿಗೂ ವ್ಯಾಪಿಸಿದ ಕೇಸರಿ-ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿದ್ದಕ್ಕೆ ಬುರ್ಖಾ ಹಾಕಿದ ವಿದ್ಯಾರ್ಥಿನಿಯರು
ತರಗತಿಯಲ್ಲಿ ಸ್ಕಾರ್ಫ್ ಧರಿಸುವುದು ಸಮವಸ್ತ್ರ ನೀತಿಯ ವಿರುದ್ಧವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಅವಕಾಶ ನೀಡಿರಲಿಲ್ಲ. ಕಾಲೇಜು ಪ್ರಾಂಶುಪಾಲರ ನಡೆ ಖಂಡಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಸ್ಕಾರ್ಫ್ ವಿವಾದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಪರ ವಿರೋಧವಾದ ಚರ್ಚೆಗಳು ನಡೆಯುತ್ತಿವೆ. ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಈ ವಿಚಾರ ಸುದ್ದಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮಸ್ಯೆಗೆ ಪೂರ್ಣವಿರಾಮ ಹಾಕಲು ಮುಂದಾಗಿದೆ.

ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಸರ್ಕಾರ ಸ್ಕಾರ್ಫ್ ವಿವಾದದ ಕುರಿತಾಗಿ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ