ಆ್ಯಪ್ನಗರ

ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಸಿದ್ದತೆ: ಸಂಘಟನೆ, ಚುನಾವಣಾ ತಯಾರಿ ಚರ್ಚೆ: ಪ್ರಮುಖರು ಭಾಗಿ

ಇದರಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ವಿವಿಧ ಮೋರ್ಚಾ, ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಪ್ರಭಾರಿಗಳು, ವಿಭಾಗ ಪ್ರಭಾರಿಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೆ ರಾಜಕೀಯ, ಸಂಘಟನಾತ್ಮಕ ವಿಚಾರವಾಗಿ ವಿಶ್ಲೇಷಣೆಗಳು ಹಾಗೂ ಚರ್ಚೆ ನಡೆಯಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಚರ್ಚೆ, ಚಿಂತನೆ ನಡೆದು ಕೆಲವೊಂದು ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಸಶಕ್ತ ಭಾರತಕ್ಕಾಗಿ ಸಮೃದ್ಧ ಕರ್ನಾಟಕ ಎಂಬ ಘೋಷಣೆಯೊಂದಿಗೆ ಕಾರ್ಯಕಾರಿಣಿ ನಡೆಯಲಿದೆ.‌

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 6 Oct 2022, 2:12 pm
ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಶುಕ್ರವಾರ ಬೆಳಗ್ಗೆ 10.30 ಕ್ಕೆ ಉದ್ಘಾಟನೆಗೊಳ್ಳಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕಾರಿಣಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
Vijaya Karnataka Web The state BJP executive meeting


ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು,‌ ಪಕ್ಷದ ಕೋರ್ ಕಮಿಟಿ ಸದಸ್ಯರು ಸೇರಿದಂತೆ 592 ಮಂದಿ ರಾಜ್ಯ ಕಾರ್ಯಕಾರಣಿ ಸದಸ್ಯರು ಭಾಗಿಯಾಗಲಿದ್ದಾರೆ. ಇದರಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ವಿವಿಧ ಮೋರ್ಚಾ, ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಪ್ರಭಾರಿಗಳು, ವಿಭಾಗ ಪ್ರಭಾರಿಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೆ ರಾಜಕೀಯ, ಸಂಘಟನಾತ್ಮಕ ವಿಚಾರವಾಗಿ ವಿಶ್ಲೇಷಣೆಗಳು ಹಾಗೂ ಚರ್ಚೆ ನಡೆಯಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಚರ್ಚೆ, ಚಿಂತನೆ ನಡೆದು ಕೆಲವೊಂದು ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಸಶಕ್ತ ಭಾರತಕ್ಕಾಗಿ ಸಮೃದ್ಧ ಕರ್ನಾಟಕ ಎಂಬ ಘೋಷಣೆಯೊಂದಿಗೆ ಕಾರ್ಯಕಾರಿಣಿ ನಡೆಯಲಿದೆ.‌
Bharat Jodo Yatra: ಕಾಂಗ್ರೆಸ್‌ ಪಾದಯಾತ್ರೆಗೆ ತಿರುಗೇಟು ನೀಡಲು ಬಿಜೆಪಿ 'ಪಂಚ'ತಂತ್ರ!
ಮುಂದಿನ 25 ವರ್ಷಗಳ ಅಮೃತ ಭಾರತಕ್ಕೆ ಕರ್ನಾಟಕದ ಕೊಡುಗೆ ಏನು? ಎಂಬ ಬಗ್ಗೆ ರೋಡ್ ಮ್ಯಾಪ್ ಜೊತೆಗೆ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ. ಇದರ ಆಧಾರದಲ್ಲಿ ಮುಂದಿನ ಅಜೆಂಡಾ ರೂಪಿಸಲು ನಿರ್ಧಾರ ಮಾಡಲಾಗಿದ್ದು, ಅದಕ್ಕೆ ಪೂರಕವಾಗಿ ಸಂಘಟನೆ ಬಲಗೊಳಿಸುವ ಪ್ರಯತ್ನವನ್ನು ಕಾರ್ಯಕಾರಿಣಿ ಸಭೆಯ ಮೂಲಕ ಬಿಜೆಪಿ ನಡೆಸಲಿದೆ. ರಾಜ್ಯದ ಇನ್ನೇನು ವಿಧಾನಸಭೆ ಚುನಾವಣೆಗೆ ಆರೇಳು ತಿಂಗಳು ಬಾಕಿ ಉಳಿದಿದೆ. ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯೂ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ವಿಚಾರಗೋಷ್ಠಿ ಜೊತೆಗೆ ಪ್ರಶ್ನೋತ್ತರಕ್ಕೂ ಅವಕಾಶ ಕಲ್ಪಿಸಲಾಗಿದ್ದು, ಚುನಾವಣಾ ತಂತ್ರಗಾರಿಕೆ ಬಗ್ಗೆಯೂ ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.

ಸಿದ್ಧತೆ ಪರಿಶೀಲನೆ ನಡೆಸಿದ ಸಿ.ಟಿ ರವಿ ಕಾರ್ಯಕಾರಿಣಿ ಸಭೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ವೇದಿಕೆ, ಆಸನ ವ್ಯವಸ್ಥೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ‌ ರವಿ ಪರಿಶೀಲನೆ ನಡೆಸಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ