ಆ್ಯಪ್ನಗರ

Karnataka Politics: ರಾಜ್ಯ ಸರಕಾರ ಪುನರ್ ರಚನೆ ಇಲ್ಲ, ವಿಸ್ತರಣೆಯೂ ಇಲ್ಲವೆಂದ ಸಿದ್ದು

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯಾವ ಕಾರಣಕ್ಕೆ ಕಾಂಗ್ರೆಸ್ ಸೋತಿದೆ ಎಂಬುದು ಗೊತ್ತಿಲ್ಲ. ಇಂದು ಲೋಕಸಭಾ ಫಲಿತಾಂಶದ ಬಗ್ಗೆ ತಳಮಟ್ಟದ ಕಾರ್ಯಕರ್ತರ ಜೊತೆ ಪರಾಮರ್ಶೆ ನಡೆಸಲಾಗುವುದು. - ಸಿದ್ದರಾಮಯ್ಯ, ಸಮನ್ವಯ ಸಮಿತಿ ಅಧ್ಯಕ್ಷ

Vijaya Karnataka Web 27 May 2019, 12:13 pm
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಗೆ ಹೀನಾಯ ಸೋಲು ಸಂಭವಿಸಿದ ನಂತರ ರಾಜ್ಯ ಸರಕಾರದ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದ್ದು, ಅತೃಪ್ತರನ್ನು ಸಮಾಧಾನ ಪಡಿಸಲು ಉಭಯ ಪಕ್ಷಗಳಲ್ಲಿ ಸಚಿವ ಸ್ಥಾನ ತ್ಯಾಗದ ಪರ್ವ ನಡೆಯಲಿದೆ ಎನ್ನಲಾಗಿತ್ತು.
Vijaya Karnataka Web Siddaramaiah


ಆದರೆ ಈ ಎಲ್ಲಾ ಪ್ರಶ್ನೆಗಳಿಗೆ ತೆರೆ ಎಳೆಯುವಂತೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ರಾಜ್ಯ ಸರಕಾರದ ಪುನರ್‌ ರಚನೆಯೂ ಇಲ್ಲ, ಸಂಪುಟ ವಿಸ್ತರಣೆಯೂ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಮ್ಮಲ್ಲಿ ಒಂದು ಹಾಗೂ ಜೆಡಿಎಸ್ನಲ್ಲಿ ಎರಡು ಸ್ಥಾನ ಖಾಲಿ ಇದೆ. ಅದರಲ್ಲಿ ನಮ್ಮ ಸ್ಥಾನವನ್ನು ತುಂಬಲು ನಿರ್ಧಾರ ಮಾಡಿದ್ದೇವೆ. ಜೆಡಿಎಸ್ ಏನು ಮಾಡುತ್ತದೆ ಎಂದು ನಮಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಸೋಲಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಇವಿಎಂ ಮೇಲೆ ಈಗಲೂ ಅನುಮಾನ ಇದೆ. ಆದರೂ ಜನರ ಆದೇಶವನ್ನು ನಾವು ಗೌರವಿಸುತ್ತೇವೆ. ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.

ಇನ್ನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಯಾವ ಕಾರಣಕ್ಕೆ ಕಾಂಗ್ರೆಸ್ ಸೋತಿದೆ ಎಂಬುದು ಗೊತ್ತಿಲ್ಲ. ಇಂದು ಲೋಕಸಭಾ ಫಲಿತಾಂಶದ ಬಗ್ಗೆ ತಳಮಟ್ಟದ ಕಾರ್ಯಕರ್ತರ ಜೊತೆ ಪರಾಮರ್ಶೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ