ಆ್ಯಪ್ನಗರ

ಕರ್ನಾಟಕದಲ್ಲೂ ಮನೆ ಬಾಗಿಲಿಗೆ ಮದ್ಯ?

ಆನ್‌ಲೈನ್ ಹಾಗೂ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಲು ರಾಜ್ಯ ಸರಕಾರ ಮುಂದಾಗಿದೆ.

TIMESOFINDIA.COM 20 Oct 2018, 11:58 am
ಬೆಂಗಳೂರು: ಆನ್‌ಲೈನ್ ಹಾಗೂ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಲು ರಾಜ್ಯ ಸರಕಾರ ಮುಂದಾಗಿದೆ.
Vijaya Karnataka Web liqour


ಈ ಸಂಬಂಧ ಪ್ರಸ್ತಾವನೆ ಸಿದ್ದಪಡಿಸಿರುವ ಅಬಕಾರಿ ಇಲಾಖೆ ಅಧಿಕಾರಿಗಳು, 'ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಹಾಗೂ ಡ್ರಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ' ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಮಹಾರಾಷ್ಟ್ರ ಸರಕಾರ ಕೂಡ ಇದೇ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿತ್ತು. ಆದರೆ, ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ಪ್ರಯತ್ನವನ್ನು ಕೈ ಬಿಟ್ಟಿತ್ತು.

'ಅಬಕಾರಿ ಇಲಾಖೆಯ ಪ್ರಸ್ತಾವನೆಯನ್ನು ಸ್ವೀಕರಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ' ಎಂದು ಹೆಚ್ಚುವರಿ ಹಣಕಾಸು ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್ ತಿಳಿಸಿದ್ದಾರೆ.

'ಪ್ರಸ್ತಾವನೆ ಸಂಬಂಧ ಚರ್ಚಿಸುವ ಮುನ್ನ ಅಬಕಾರಿ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟವರ ಜತೆ ಎರಡು ಸುತ್ತಿನ ಸಭೆ ನಡೆಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ವೈನ್ ವ್ಯಾಪಾರಿಗಳ ಸಂಘದ ಪ್ರತಿನಿಧಿಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾರೆ' ಎಂದು ಕರ್ನಾಟಕದ ವೈನ್ ಮರ್ಚಂಟ್ ಅಸೋಸಿಯೇಷನ್‌ನ ಬಿ ಗೋವಿಂದರಾಜ್ ಹೆಗ್ಡೆ ತಿಳಿಸಿದ್ದಾರೆ.

ಒಂದು ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಈ ಪ್ರಸ್ತಾವನೆಯನ್ನು ಒಪ್ಪಿಕೊಂಡರೆ, ಮದ್ಯೋದ್ಯಮಕ್ಕೆ 1500-2000 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಬರಲಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ.

ಚೆನ್ನೈ ಮೂಲದ ಹಿಪ್‌ಬಾರ್ ಎಂಬ ಖಾಸಗಿ ಪಾನೀಯ ವಿತರಣಾ ಆ್ಯಪ್‌, ಈಗಾಗಲೇ ಬೆಂಗಳೂರಿನಲ್ಲೂ ಸಹ ಮನೆ ಬಾಗಿಲಿಗೆ ಮದ್ಯ ವಿತರಿಸುವ ಕೆಲಸ ಮಾಡುತ್ತಿದೆ. ಈಗ ರಾಜ್ಯ ಸರಕಾರ ಕೂಡ ಈ ಯೋಜನೆಯನ್ನು ಜಾರಿಗೊಳಿಸುವಲ್ಲಿ ಸಫಲವಾಗುತ್ತದೆಯೋ ಎಂದು ಕಾದು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ