ಆ್ಯಪ್ನಗರ

ಕೃಷಿ ಕಾಯ್ದೆಗೆ ವಿರೋಧ: ರಾಜ್ಯದಲ್ಲೂ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಜನವರಿ 26 ರಂದು ಬೃಹತ್ ಟ್ರ್ಯಾಕ್ಟರ್‌ ಪರೇಡ್ ನಡೆಯಲಿದ್ದು ಅದನ್ನು ಬೆಂಬಲಿಸಿ ಕರ್ನಾಟಕದಲ್ಲೂ ರೈತರು ಹಾಗೂ ವಿವಿಧ ಸಂಘಟನೆಗಳು ಟ್ರ್ಯಾಕ್ಟರ್‌ ಪರೇಡ್ ನಡೆಸಲಿವೆ.

Vijaya Karnataka Web 25 Jan 2021, 9:32 am
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ರಾಜ್ಯದಲ್ಲೂ ರೈತರು ಟ್ರ್ಯಾಕ್ಟರ್‌ ಪರೇಡ್ ನಡೆಸಲು ನಿರ್ಧರಿಸಿದ್ದಾರೆ. ಜನವರಿ 26, ಗಣರಾಜ್ಯೋತ್ಸವದಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಹಾಗೂ ಟ್ರ್ಯಾಕ್ಟರ್‌ ಪರೇಡ್ ನಡೆಸಲಿದ್ದಾರೆ.
Vijaya Karnataka Web tractor parade


ಬೆಂಗಳೂರಿನಲ್ಲಿ ನಡೆಯಲಿರುವ ಟ್ರ್ಯಾಕ್ಟರ್‌ ಪರೇಡ್‌ನಲ್ಲಿ ವಿವಿಧ ಜಿಲ್ಲೆಗಳ ಸುಮಾರು 25,000 ಜನರು ಭಾಗಿಯಾಗಲಿದ್ದಾರೆ ಎಂದು ರೈತ ಸಂಘಟನೆಗಳ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ. ಸಿಎಂ ಕಾರ್ಯಕ್ರಮದ ಬಳಿಕ ಬೆಂಗಳೂರು ಹಾಗೂ ನೆಲಮಂಗಲದ ನಡುವಿನ ನೈಸ್ ಜಂಕ್ಷನ್‌ನಿಂದ ಟ್ರ್ಯಾಕ್ಟರ್‌ ಪರೇಡ್ ಬೆಂಗಳೂರು ನಗರ ಪ್ರವೇಶ ಮಾಡಲಿದೆ.

ಏನಿದು ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ, ರೈತರ ಆತಂಕಕ್ಕೆ ಕಾರಣ ಏನು?

ಜಿಲ್ಲಾ ಮಟ್ಟದಲ್ಲೂ ವಿವಿಧ ಜನಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಪ್ರತಿಭಟನೆ ಹಾಗೂ ಟ್ರ್ಯಾಕ್ಟರ್‌ ಪರೇಡ್ ನಡೆಸಲು ನಿರ್ಧರಿಸಿವೆ. ಹಾಸನ, ಮಂಗಳೂರು, ಮಂಡ್ಯ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತ, ಕಾರ್ಮಿಕ, ಎಡಪಂಥೀಯ ಸಂಘಟನೆಗಳು ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಿದ್ದಾರೆ.

ಬಿಗಿ ಪೊಲೀಸ್ ಭದ್ರತೆ

ರೈತರ ಟ್ರ್ಯಾಕ್ಟರ್‌ ಪರೇಡ್ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಭಾರೀ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ. ಟ್ರಾಫಿಕ್ ಜಾಮ್‌ ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರ ವ್ಯವಸ್ಥೆಯಲ್ಲೂ ಕೆಲವೊಂದು ಮಾರ್ಪಾಡುಗಳನ್ನು ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸುಮಾರು 2000 ಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಸದ್ಯ ಟ್ರ್ಯಾಕ್ಟರ್‌ ಪರೇಡ್‌ಗೆ ಅವಕಾಶ ನೀಡದೇ ಇದ್ದರೂ ರೈತರು ಮಾತ್ರ ಟ್ರ್ಯಾಕ್ಟರ್‌ ಪರೇಡ್ ನಡೆಸುವುದಾಗಿ ತಿಳಿಸಿದ್ದಾರೆ. ಪೊಲೀಸರು ತಡೆದರೆ ಹೆದ್ದಾರಿ ಬಂದ್‌ ಆಗಲಿವೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಮೆಜೆಸ್ಟಿಕ್ ಮೂಲಕ ಹೋಗುವ ವಾಹನಗಳಿಗೆ ಪರ್ಯಾಯ ರಸ್ತೆಯನ್ನು ಕಲ್ಪಿಸಲಾಗಿದ್ದು, ಆನಂದ್ ರಾವ್ ಸರ್ಕಲ್, ಹಳೇ ಜೆಡಿಎಸ್ ಆಫೀಸ್ , ರೇಸ್ ಕೋರ್ಸ್, ವಿಧಾನಸೌಧ , ಸಿಐಡಿ ಕಚೇರಿ ಮಾರ್ಗವಾಗಿ ಕಾರ್ಪೋರೇಷನ್ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ