ಆ್ಯಪ್ನಗರ

ಕೋಟ್ಯಂತರ ಭಾರತೀಯರ ಕನಸು ಪೂರ್ಣಗೊಂಡಿತು, ಪ್ರಹ್ಲಾದ್ ಜೋಶಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಾಗಿ ಅವರು ಟ್ವೀಟ್‌ ಮಾಡಿದ್ದು ಅದರ ವಿವರ ಇಲ್ಲಿದೆ.

Vijaya Karnataka Web 5 Aug 2020, 1:51 pm
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿಪೂಜೆ ಮಾಡುವ ಮೂಲಕ ಕೋಟ್ಯಂತರ ಭಾರತೀಯರ ಕನಸು ಇದೀಗ ಪೂರ್ಣಗೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋ‍ಶಿ ಸಂತಸ ವ್ಯಕ್ತಪಡಿಸಿದ್ದಾರೆ.
Vijaya Karnataka Web rama mandir


ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣ ಭೂಮಿಪೂಜೆ ಕೋಟ್ಯಂತರ ಪ್ರಭು ಶ್ರೀ ರಾಮ ಭಕ್ತ ಭಾರತೀಯರಿಗೆ ಐತಿಹಾಸಿಕ ಮತ್ತು ಭಾವಪೂರ್ಣ ಕ್ಷಣವಾಯಿತು ಎಂದು ಟ್ವಿಟ್ಟರ್‌ನಲ್ಲಿ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.


ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿ ಪೂಜೆ ಪೂಜಾ ಕಾರ್ಯಕ್ರಮ ನಡೆಯುತ್ತಿದ್ದು ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ, ಆರ್‌ಎಸ್‌ಎಸ್ ವರಿಷ್ಠ ಮೋಹನ್ ಭಾಗವತ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

ಭೂಮಿ ಪೂಜೆ ಹಿನ್ನೆಲೆಯಲ್ಲಿ ಅಯೋಧ್ಯೆ ನಗರ ಅಲಂಕಾರದಿಂದ ಕಂಗೊಳಿಸುತ್ತಿದೆ. ಇದಕ್ಕೂ ಮುನ್ನ ಮಂಗಳವಾರ ಹಲವು ಧಾರ್ಮಿಕ ವಿಧಿವಿಧಾನಗಳು ನಡೆದಿವೆ. ಆ.04 ರ ಸಂಜೆ ದೀಪೋತ್ಸವ, ದೀಪ ಅಲಂಕಾರಗಳಿಂದ ಅಯೋಧ್ಯೆ, ವಿಶೇಷವಾಗಿ ಸರಯೂ ನದಿ ಬಳಿ ಇರುವ ಘಾಟ್ ಗಳು ಮಿಂಚುತ್ತಿದ್ದವು.

ಇನ್ನು ಅಯೋಧ್ಯೆಯಲ್ಲಿ ಭೂಮಿಪೂಜೆ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹಿಂದೂ ಸಂಘಟನೆಗಳು ಹಾಗೂ ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್‌ ಯಡಿಯೂರಪ್ಪ ಸೇರಿದಂತೆ ಸಚಿವರು ಹಾಗೂ ಬಿಜೆಪಿಯ ಶಾಸಕರು ಕಾರ್ಯಕ್ರಮಕ್ಕೆ ಶುಭಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ