ಆ್ಯಪ್ನಗರ

ರಾಜೀನಾಮೆ ಅಂಗೀಕಾರಕ್ಕೆ ವೈಜನಾಥ್‌ ಪಾಟೀಲ್‌ ಆಗ್ರಹ

ಚಿಂಚೋಳಿ ಶಾಸಕ ಡಾ.ಉಮೇಶ್‌ ಜಾಧವ್‌ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸಬೇಕೆಂದು ಮಾಜಿ ಸಚಿವ ವೈಜನಾಥ್‌ ಪಾಟೀಲ್‌ ಆಗ್ರಹಿಸಿದ್ದಾರೆ.

Vijaya Karnataka 19 Mar 2019, 5:00 am
ಬೆಂಗಳೂರು: ಚಿಂಚೋಳಿ ಶಾಸಕ ಡಾ.ಉಮೇಶ್‌ ಜಾಧವ್‌ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸಬೇಕೆಂದು ಮಾಜಿ ಸಚಿವ ವೈಜನಾಥ್‌ ಪಾಟೀಲ್‌ ಆಗ್ರಹಿಸಿದ್ದಾರೆ.
Vijaya Karnataka Web vyjanath-patil


ಈ ಸಂಬಂಧ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌ ಅವರಿಗೆ ಪತ್ರ ಬರೆದಿರುವ ವೈಜನಾಥ್‌ ಪಾಟೀಲ್‌ ಅವರು, ''ಉಮೇಶ್‌ ಜಾಧವ್‌ ಅವರು ಶಾಸಕ ಸ್ಥಾನಕ್ಕೆ ತಮ್ಮ ಬಳಿ ಖುದ್ದಾಗಿ ಬಂದು ರಾಜೀನಾಮೆ ಸಲ್ಲಿಸಿ 15 ದಿನಗಳು ಕಳೆದಿವೆ ಎಂಬುದು ಗೊತ್ತಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕ್ಷಣವೇ ಅವರ ರಾಜೀನಾಮೆಯನ್ನು ಅಂಗೀಕರಿಸಬೇಕಾಗುತ್ತದೆ. ಆದರೆ ಈಗಾಗಲೇ ವಿಳಂಬವಾಗಿದೆ. ಆದ್ದರಿಂದ ತಕ್ಷಣವೇ ರಾಜೀನಾಮೆ ಅಂಗೀಕರಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ,'' ಎಂದು ಎಚ್ಚರಿಕೆ ನೀಡಿದ್ದಾರೆ.

''ಪಕ್ಷಾಂತರ ಮಾಡುವುದು ಪ್ರತಿಯೊಬ್ಬರ ಸಂವಿಧಾನಾತ್ಮಕ ಹಕ್ಕು, ಅವರು ಈಗ ಬೇರೆ ಪಕ್ಷ ಸೇರಿದ್ದಾರೆ. ಚಿಂಚೋಳಿ ಶಾಸಕರ ರಾಜೀನಾಮೆಯಿಂದ ಕ್ಷೇತ್ರದಲ್ಲಿ ಶೂನ್ಯದ ವಾತಾವರಣ ಸೃಷ್ಟಿಯಾಗಿದೆ. ಈ ಕ್ಷೇತ್ರಕ್ಕೂ ಚುನಾವಣೆ ನಡೆಯಬೇಕಾಗಿದೆ. ಆದ್ದರಿಂದ ಉಮೇಶ್‌ ಜಾಧವ್‌ ರಾಜೀನಾಮೆ ಅಂಗೀಕರಿಸಿ ಮುಂದಿನ ಹಾದಿಯನ್ನು ಸುಗಮ ಮಾಡಿಕೊಡಬೇಕು,''ಎಂದು ಪತ್ರದಲ್ಲಿ ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ