ಆ್ಯಪ್ನಗರ

14 ತಿಂಗಳಲ್ಲಿ ಮೂರು ಬಾರಿ ಸಿಎಂಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದ ವಾಲಾ

ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯಪಾಲ ವಜುಭಾಯ್ ವಾಲಾ 3 ಬಾರಿ ಮುಖ್ಯಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

Vijaya Karnataka 27 Jul 2019, 9:58 am
ಬೆಂಗಳೂರು: 14 ತಿಂಗಳ ಸೀಮಿತ ಅವಧಿಯಲ್ಲಿ ಮೂರು ಬಾರಿ ಸಿಎಂಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದ ವಿಶೇಷಕ್ಕೆ ರಾಜ್ಯಪಾಲ ವಜುಭಾಯ್‌ ವಾಲಾ ಸಾಕ್ಷಿಯಾದರು.
Vijaya Karnataka Web Vala


ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಸನ್ನಿವೇಶದಲ್ಲಿ 104 ಸ್ಥಾನ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಗೆ ಸರಕಾರ ರಚಿಸಲು ರಾಜ್ಯಪಾಲರು ಅವಕಾಶ ಕಲ್ಪಿಸಿದ್ದರು. ಅಂತೆಯೇ, 2018ರ ಮೇ 17 ರಂದು ಬಿ.ಎಸ್‌.ಯಡಿಯೂರಪ್ಪ ಅವರು ಸಿಎಂ ಆಗಿ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದರು.

ಆದರೆ, ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಅವರು ವಿಫಲರಾದಾಗ ಮೈತ್ರಿಕೂಟದ ಸಿಎಂ ಆಗಿ ಎಚ್‌.ಡಿ.ಕುಮಾರಸ್ವಾಮಿ 2018ರ ಮೇ 23ರಂದು ರಾಜ್ಯಪಾಲರಿಂದ ಪ್ರತಿಜ್ಞಾವಿಧಿ ಸ್ವೀಕರಿಸಿದರು. 14 ತಿಂಗಳು ಕಳೆಯುತ್ತಿದ್ದಂತೆ ಮತ್ತೊಮ್ಮೆ ಶುಕ್ರವಾರ ಬಿ.ಎಸ್‌.ಯಡಿಯೂರಪ್ಪ ಅವರು ನೂತನ ಸಿಎಂ ಆಗಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಸೀಮಿತ ಅವಧಿಯಲ್ಲಿ 3 ಸರಕಾರಗಳ ರಚನೆಗೆ ರಾಜ್ಯಪಾಲರು ಸಾಕ್ಷಿಯಾಗುವಂತಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ