ಆ್ಯಪ್ನಗರ

ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಚರಣೆ: ಗೋವಿಂದ ಕಾರಜೋಳ

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Vijaya Karnataka Web 18 Sep 2019, 8:58 pm
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ವವಾಗಿ ಆಚರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದರು.
Vijaya Karnataka Web ಗೋವಿಂದ ಕಾರಜೋಳ
ಗೋವಿಂದ ಕಾರಜೋಳ


ವಿಕಾಸಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಜಯಂತಿ ರಾಜ್ಯಮಟ್ಟದ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವಿಟ್ ಹಾಲ್ ನಲ್ಲಿ ಆಚರಿಸಲಾಗುವುದು. ಸಾಮಾಜಿಕ, ಸಾಹಿತ್ಯ ಹಾಗು ಶಿಕ್ಷಣ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಮೂವರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಮೆರವಣಿಗೆಯು ಮಹರ್ಷಿ ವಾಲ್ಮೀಕಿ ಪುತ್ಥಳಿಯವರೆಗೆ ಆಗಮಿಸಲಿದೆ. ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ವಿವಿಧ 10 ಕಲಾ ತಂಡಗಳು ಪಾಲ್ಗೊಳ್ಳಲಿವೆ. ಶಿಷ್ಠಾಚಾರದಂತೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಸಮಾಜದ ಬಂಧುಗಳು ಸ್ವಯಂ ಪ್ರೇರಿತವಾಗಿ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಲ್ಲಿ ಆಚರಿಸುವಂತೆ ಸುತ್ತೋಲೆಯನ್ನು ಹೊರಡಿಸಲಾಗುವುದು ಎಂದರು.

ಅಂಬಿಗರ ಚೌಡಯ್ಯ, ಶಿವಾಜಿ ಜಯಂತಿ, ಬಸವ ಜಯಂತಿ ಕಾರ್ಯಕ್ರಮಗಳನ್ನು ಸರಕಾರಿ ಕಾರ್ಯಕ್ರಮಗಳನ್ನಾಗಿ ಆಚರಿಸಲು ತಾವು ವಹಿಸಿದ್ದ ಶ್ರಮವನ್ನು ಗೋವಿಂದ ಕಾರಜೋಳ ಸ್ಮರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ