ಆ್ಯಪ್ನಗರ

ಮೇಲ್ಮನೆಯಲ್ಲಿ ವಿಕ ವರದಿ ಪ್ರಸ್ತಾಪ

ಶಾಲೆಗಳು ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಇನ್ನೂ ಮಕ್ಕಳಿಗೆ ಸಮವಸ್ತ್ರ ಪೂರೈಸದಿರುವ ಕುರಿತು 'ವಿಕ' ಪ್ರಕಟಿಸಿದ ವರದಿ ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪವಾಗಿ ಸರಕಾರದ ಗಮನಸೆಳೆಯುವಲ್ಲಿ ಸಫಲವಾಯಿತು.

Vijaya Karnataka Web 7 Jul 2018, 9:20 am
ಬೆಂಗಳೂರು: ಶಾಲೆಗಳು ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಇನ್ನೂ ಮಕ್ಕಳಿಗೆ ಸಮವಸ್ತ್ರ ಪೂರೈಸದಿರುವ ಕುರಿತು 'ವಿಕ' ಪ್ರಕಟಿಸಿದ ವರದಿ ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪವಾಗಿ ಸರಕಾರದ ಗಮನಸೆಳೆಯುವಲ್ಲಿ ಸಫಲವಾಯಿತು.
Vijaya Karnataka Web VK


ನಿಯಮ 330ರಡಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಸುನಿಲ್‌ ಸುಬ್ರಮಣಿ, ''ಮೈಸೂರು, ಹಾಸನ, ಕೊಡಗು ಸೇರಿದಂತೆ 16 ಜಿಲ್ಲೆಗಳಲ್ಲಿ ಇನ್ನೂ ಮಕ್ಕಳಿಗೆ ಸಮರ್ಪಕವಾಗಿ ಸಮವಸ್ತ್ರ ಪೂರೈಕೆಯಾಗಿಲ್ಲ.11 ಜಿಲ್ಲೆಗಳಲ್ಲಿ ಭಾಗಶಃ ವಿತರಿಸಲಾಗಿದೆ. ತಕ್ಷಣ ಎಲ್ಲ ಮಕ್ಕಳಿಗೂ ಸಮವಸ್ತ್ರ ವಿತರಿಸಲು ಸರಕಾರ ಮುಂದಾಗಬೇಕು'' ಎಂದು ಆಗ್ರಹಿಸಿದರು.

ಈ ಬಗ್ಗೆ ಉತ್ತರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್‌. ಮಹೇಶ್‌, ''ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ತರಿಸಿಕೊಂಡು ಸದನಕ್ಕೆ ಮಾಹಿತಿ ನೀಡಲಾಗುವುದು'' ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ