ಆ್ಯಪ್ನಗರ

ಗೌರಿ ಹತ್ಯೆ ಆರೋಪಿ ಬಂಧನ: ಸಿದ್ದರಾಮಯ್ಯಗೆ ಕವಿತಾ ಧನ್ಯವಾದ

ಗೌರಿ ಲಂಕೇಶ್ ಹತ್ಯೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಮೃತರ ಸಹೋದರಿ ಕವಿತಾ ಲಂಕೇಶ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ.

Vijaya Karnataka 16 Jun 2018, 3:21 pm
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಮೃತರ ಸಹೋದರಿ ಕವಿತಾ ಲಂಕೇಶ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ.
Vijaya Karnataka Web Gauri Lankesh


ಭೇಟಿ ಬಳಿಕ ವರದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವಿಶೇಷ ತನಿಖಾ ತಂಡ ರಚಿಸಿದ್ದರು. ಆರೋಪಿ ಈಗ ಎಸ್ಐಟಿ ವಶದಲ್ಲಿದ್ದಾನೆ. ಹಾಗಾಗಿ ಸಿದ್ದರಾಮಯ್ಯನವರಿಗೆ ಕೃತಜ್ಞತೆ ತಿಳಿಸಲು ಬಂದಿದ್ದೇನೆ, ಎಂದರು.

ಆರೋಪಿ ಬಂಧನದಿಂದ ಗೌರಿಗೆ ನ್ಯಾಯ ಸಿಗುವ ವಿಶ್ವಾಸವಿದೆ, ಎಂದವರು ಹೇಳಿದ್ದಾರೆ.

ಗೌರಿ ಲಂಕೇಶ್‌ಗೆ ಗುಂಡ್ಡಿಕ್ಕಿರುವ ಆರೋಪಿ ಪರಶುರಾಮ್ ವಾಗ್ಮೋರೆ ಈಗ ವಿಶೇಷ ತನಿಖಾ ತಂಡದ ವಶದಲ್ಲಿದ್ದು, ಆತ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ