ಆ್ಯಪ್ನಗರ

ಧರ್ಮಸ್ಥಳದಲ್ಲಿ ನೀರಿನ ಅಭಾವ: ವೀರೇಂದ್ರ ಹೆಗ್ಗಡೆ ಜತೆ ಮುಖ್ಯ ಕಾರ್ಯದರ್ಶಿ ಚರ್ಚೆ

ಈ ಸಂದರ್ಭದಲ್ಲಿ ಸರಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ ಹೆಗ್ಗಡೆ, ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದರು.

Vijaya Karnataka Web 20 May 2019, 4:54 pm
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದು, ಅವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚಿಸಿದರು.
Vijaya Karnataka Web ವೀರೇಂದ್ರ ಹೆಗ್ಗಡೆ
ವೀರೇಂದ್ರ ಹೆಗ್ಗಡೆ


ಈ ಸಂದರ್ಭದಲ್ಲಿ ಸರಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ ಹೆಗ್ಗಡೆ, ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಸೋಮವಾರ ಸಂಜೆಯೇ ಧರ್ಮಸ್ಥಳಕ್ಕೆ ತೆರಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ