ಆ್ಯಪ್ನಗರ

ನಾಳೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ; 15 ದಿನ ಅಭಿಯಾನ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಮತ್ತೆ ಅವಕಾಶ ದೊರೆತಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕಾದರೆ, ತಿದ್ದುಪಡಿ ಮಾಡಬೇಕಾದರೆ 15 ದಿನಗಳ ಕಾಲಾವಕಾಶ ಇದೆ.

Vijaya Karnataka Web 31 Aug 2019, 8:46 pm
ಬೆಂಗಳೂರು: ಶಾಸಕರ ರಾಜೀನಾಮೆಯಿಂದ ತೆರವಾಗಿರುವ 17 ವಿಧಾನಸಭಾ ಸ್ಥಾನಗಳಿಗೂ ಚುನಾವಣೆ ನಡೆಸಲು ಆಯೋಗ ಸಿದ್ಧವಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಸಂಜೀವ್‌ ಕುಮಾರ್
ಸಂಜೀವ್‌ ಕುಮಾರ್


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಸಂಜೀವ್‌ ಕುಮಾರ್‌ ಮಾತನಾಡಿದರು.

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ರಾಜಕೀಯ ಪಕ್ಷಗಳ ಮುಖಂಡರ ಸಹಕಾರದೊಂದಿಗೆ ಪರಿಷ್ಕರಣೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಮತದಾರ ಪಟ್ಟಿ ಪರಿಷ್ಕರಣೆ, ತಿದ್ದುಪಡಿ, ಹೆಸರು ತೆಗೆದು ಹಾಕುವ, ಬದಲಾವಣೆ ಮಾಡುವ ಕುರಿತಂತೆ ಸೆಪ್ಟೆಂಬರ್ 1 ರಿಂದ 15ರವರೆಗೆ ರಾಜ್ಯದ ಎಲ್ಲಾ ಕಂದಾಯ ವಿಭಾಗಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಬೆಂಗಳೂರಿನಲ್ಲಿ ಹೇಳಿದರು.

ಜನವರಿ 1, 2020ಕ್ಕೆ 18 ವರ್ಷ ಪೂರ್ಣಗೊಳ್ಳುವ ಎಲ್ಲಾ ಯುವಕ-ಯುವತಿಯರಿಗೆ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದರು.

ರಾಜ್ಯದಲ್ಲಿ ಸದ್ಯ 5,10,60,498 ಮತದಾರರು ಇದ್ದಾರೆ. ಪುರುಷರು 2,58,01,694, ಮಹಿಳೆಯರು 2,52,54,153 ಮತದಾರರಿದ್ದಾರೆ. ಇತರೆ 4,651 ಮತದಾರರಿದ್ದಾರೆ ಎಂದು ಸಂಜೀವ್‌ ಕುಮಾರ್‌ ಸಂಪೂರ್ಣ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ