ಆ್ಯಪ್ನಗರ

ನಿರಾಶ್ರಿತರು ಭಯ ಪಡಬೇಡಿ ನಿಮ್ಮ ಜತೆ ನಾವಿದ್ದೇವೆ: ಯಡಿಯೂರಪ್ಪ

ಪ್ರವಾಹ ಪೀಡಿತ ನಂಜನಗೂಡು ಪ್ರದೇಶಗಳಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪರಿಶೀಲನೆ ನಡೆಸಿದರು. ನಂತರ ಇಲ್ಲಿನ ಪ್ರಸಿದ್ಧ ನಂಜುಂಡೇಶ್ವರ ದೇವಾಲಯಕ್ಕೂ ಭೇಟಿ ಪ್ರಾರ್ಥನೆ ಸಲ್ಲಿಸಿದರು.

Vijaya Karnataka Web 12 Aug 2019, 7:35 pm
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಅನೇಕ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ‌ ಉಂಟಾಗಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಭಯ ಪಡಬೇಡಿ ನಿಮ್ಮ ಜತೆ ನಾವಿದ್ದೇವೆ, ಎಲ್ಲಾ ರೀತಿಯ ಸಹಾಯ ಮಾಡಲು ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಮೈಸೂರು ಜಿಲ್ಲೆಯ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಆಗಮಿಸಿದ ಅವರು ನಗರದ ವಿಮಾನ‌ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ಪ್ರವಾಹ ಪರಿಸ್ಥಿತಿಯಿಂದ ನಿರಾಶ್ರಿತರ ಕ್ಯಾಂಪ್ ಗಳಲ್ಲಿ ವಾಸವಿರುವವರಿಗೆ ತಕ್ಷಣ 10,000 ರೂ. ನೀಡಲು‌ ಸೂಚಿಸಿದ್ದೇನೆ‌ ಹಾಗೂ ಸಂಪೂರ್ಣ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ ನೀಡಲು ಮತ್ತು ಮನೆಗೆ ಹಾನಿ‌ಯಾಗಿದ್ದಲ್ಲಿ ರಿಪೇರಿಗಾಗಿ 1 ಲಕ್ಷ ರೂ ಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಬಾಡಿಗೆ ಮನೆಯಲ್ಲಿ ಇರಲು ಬಯಸುವ ನಿರಾಶ್ರಿತರಿಗೆ ತಿಂಗಳಿಗೆ 5 ಸಾವಿರ ಬಾಡಿಗೆ ನೀಡಲಾಗುವುದು ಮತ್ತು ಪ್ರವಾಹದಲ್ಲಿ ಮೃತರಾದ ಕುಟುಂಬಕ್ಕೆ 5 ಲಕ್ಷ ರೂ ನೀಡಲಾಗುತ್ತದೆ ಹಾಗೂ ಕೃಷಿ ಜಮೀನು ಕಳೆದುಕೊಂಡ ರೈತರಿಗೆ ಸರ್ವೆ ಮಾಡಿ ನಂತರ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ