ಆ್ಯಪ್ನಗರ

ಆರ್‌.ಆರ್‌ ನಗರ ಬೈಎಲೆಕ್ಷನ್: ಕಾಂಗ್ರೆಸ್‌ ಅಭ್ಯರ್ಥಿ ಯಾರು?

ಆರ್‌.ಆರ್‌ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂಬುವುದು ಇನ್ನೂ ಅಂತಿಮಗೊಂಡಿಲ್ಲ. ಸದ್ಯ ಮೂವರು ಆಕಾಂಕ್ಷಿಗಳ ಹೆಸರುಗಳು ಚಾಲ್ತಿಯಲ್ಲಿದ್ದು ಅಂತಿಮ ನಿರ್ಧಾರ ಇನ್ನೆರೆಡು ದಿನಗಳಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ.

Vijaya Karnataka Web 1 Oct 2020, 3:52 pm
ಬೆಂಗಳೂರು: ನವೆಂಬರ್‌ 3 ರಂದು ನಡೆಯಲಿರುವ ಆರ್. ಆರ್‌ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುವುದು ಕುತೂಹಲ ಕೆರಳಿಸಿದೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಪ್ರ್ಲಾನ್‌ನಲ್ಲಿದ್ದಾರೆ.
Vijaya Karnataka Web congress


ಅಭ್ಯರ್ಥಿ ಘೋಷಣೆಗೂ ಮೊದಲೇ ಸಂಸದ ಡಿಕೆ ಸುರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯನ್ನು ಗುರುವಾರ ನಡೆಸಲಾಗಿದೆ. ಯಾರೇ ಅಭ್ಯರ್ಥಿಯಾದರೂ ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರ ಜೊತೆಗೆ ಡಿ.ಕೆ ಸುರೇಶ್ ಚರ್ಚೆ ನಡೆಸಿದ್ದಾರೆ.

ಆರ್.‌ಆರ್ ನಗರ ಬೈಎಲೆಕ್ಷನ್: ಟಿಕೆಟ್‌ ನಿರ್ಧಾರ ಹೈಕಮಾಂಡ್‌ ಕೈಯಲ್ಲಿ, ಎಸ್‌.ಟಿ ಸೋಮಶೇಖರ್

ಸದ್ಯ ರಕ್ಷಾ ರಾಮಯ್ಯ, ಮಾಗಡಿ ಬಾಲಕೃಷ್ಣ ಸೇರಿದಂತೆ ಮೂವರ ಹೆಸರುಗಳು ಕೇಳಿ ಬರುತ್ತಿದೆ. ಆದರೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಸೇರಿದಂತೆ ಪ್ರಮುಖ ಮುಖಂಡರ ಸಭೆಯ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧ್ಯಕ್ಷ ಸ್ಥಾನ ವಹಿಸದ ಬಳಿಕ ಇದು ಮೊದಲ ಚುನಾವಣೆಯಾಗಿದ್ದು ಈ ನಿಟ್ಟಿನಲ್ಲಿ ಶಿರಾ ಅಥವಾ ಆರ್‌ಆರ್ ನಗರ ಕ್ಷೇತ್ರಗಳ ಪೈಕಿ ಕನಿಷ್ಠ ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸುವ ಅನಿವಾರ್ಯತೆ ಇದೆ. ಇದರಿಂದ ಚುನಾವಣಾ ಕಾರ್ಯಗಳಿಗೆ ಈಗಲೇ ಚಾಲನೆ ನೀಡಲಾಗಿದೆ.

ಬಿಜೆಪಿಯಲ್ಲಿರುವ ಆಂತರಿಕ ಭಿನ್ನಮತದ ಲಾಭ ಪಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ತಂತ್ರಗಾರಿಕೆ ರೂಪಿಸುತ್ತಿದ್ದು ಇನ್ನು ಒಂದೆರಡು ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಫೈನಲ್ ಮಾಡುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ