ಆ್ಯಪ್ನಗರ

ಕೋವಿಡ್‌ ವ್ಯಾಕ್ಸಿನ್: ರಾಜ್ಯದಲ್ಲಿ ಮೊದಲ ಲಸಿಕೆ ಪಡೆದವರು ಯಾರು?

ರಾಜ್ಯದಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಸಿಎಂ ಬಿಎಸ್‌ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಿಎಂ ಅಭಿಯಾನಕ್ಕೆ ಚಾಲನೆ ನೀಡಿದರು. ಅಷ್ಟಕ್ಕೂ ರಾಜ್ಯದಲ್ಲಿ ಮೊದಲು ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಯಾರು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

Vijaya Karnataka Web 16 Jan 2021, 11:58 am
ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕೋವಿಡ್ ಲಸಿಕೆಯನ್ನು ಮೊದಲು ರಾಜ್ಯದಲ್ಲಿ ಪಡೆದವರು ಯಾರು ಎಂಬ ಕುತೂಹಲ ನಿಮ್ಮಲ್ಲೂ ಇರಬಹುದು. ಹೌದು, ರಾಜ್ಯದಲ್ಲಿ ಈ ಸಂಜೀವಿನಿಯನ್ನು ಮೊದಲು ಪಡೆಯವರು ಆರೋಗ್ಯ ಇಲಾಖೆಯ ಇಬ್ಬರು ಡಿ ಗ್ರೂಪ್ ನೌಕರರು.
Vijaya Karnataka Web covid 19


ಕೋವಿಡ್‌ ಲಸಿಕೆ ಅಭಿಯಾನಕ್ಕೆ ರಾಜ್ಯದಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಶನಿವಾರ ಚಾಲನೆ ನೀಡಿದ್ದು ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಹಾಗೂ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಸಮ್ಮುಖದಲ್ಲಿ ಮೊದಲ ಕೋವಿಡ್ ಲಸಿಕೆಯನ್ನು ನೀಡಲಾಯಿತು.

ಕೊರೊನಾ ಲಸಿಕೆ ಅಭಿಯಾನ: ಭಾಷಣದ ವೇಳೆ ಭಾವುಕರಾದ ಪ್ರಧಾನಿ ಮೋದಿ, ಮಾತೇ ಹೊರಡಲಿಲ್ಲ!

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಾರ್ಡ್ ಅಟೆಂಡೆಂಟ್ ಆಗಿರುವ ನಾಗರತ್ನ ಎಂಬುವವರು ಮೊದಲು ಕೋವಿಡ್ ವಾಕ್ಸಿನನ್ನು ಪಡೆದುಕೊಂಡರು. ಇವರು ಕುರುಬರ ಕನೇನಹಳ್ಳಿ ನಿವಾಸಿಯಾಗಿದ್ದಾರೆ. ವಾಕ್ಸಿನ್ ಪಡೆದುಕೊಳ್ಳುವ ಮೊದಲು ಅವರಿಗೆ ಸಿಎಂ ಬಿವೈಎಸ್‌ ಬೆನ್ನು ತಟ್ಟಿ ಧೈರ್ಯ ತುಂಬಿದರು.

ಮೊದಲ ಕೋವಿಡ್ ವಾಕ್ಸಿನ್ ಪಡೆದುಕೊಂಡ ಅವರನ್ನು ಅರ್ಧ ಗಂಟೆಗಳ ಕಾಲ ವೈದ್ಯಕೀಯ ನಿಗಾದಲ್ಲಿ ಇಡಲಾಗಿದೆ. ಆದರೆ ಅವರ ಆರೋಗ್ಯದಲ್ಲಿ ಯಾವುದೇ ಏರುಪೇರುಗಳು ಕಂಡುಬಂದಿಲ್ಲ. ಇನ್ನು 28 ದಿನಗಳ ಬಳಿಕ ಅವರಿಗೆ ಎರಡನೇ ಡೋಸ್ ನೀಡಲಾಗುತ್ತದೆ.

ಇದೇ ಸಂದರ್ಭದಲ್ಲಿ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿರುವ ಡಿ. ಗ್ರೂಪ್ ನೌಕರ ಚಂದ್ರಶೇಖರ್‌ ರಾವ್ ಎಂಬುವವರಿಗೆ ಮೊದಲ ಲಸಿಕೆ ನೀಡಲಾಯಿತು. ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಗೌರವಿಸಲಾಯಿತು. ಲಸಿಕೆ ಪಡೆದುಕೊಂಡ ಬಳಿಕ ಮಾತನಾಡಿದ ಚಂದ್ರಶೇಖರ್‌, ಮೊದಲು ಲಸಿಕೆ ಪಡೆದುಕೊಂಡಿರುವುದಕ್ಕೆ ಹೆಮ್ಮೆ ಅನ್ನಿಸುತ್ತಿದೆ ಎಂದರು.

ಅಲ್ಲದೆ ನನ್ನ ಆರೋಗ್ಯದಲ್ಲಿ ಯಾವುದೇ ಏರುಪೇರು ಕಾಣಿಕೊಂಡಿಲ್ಲ, ನನಗೂ ಈ ಹಿಂದೆ ಕೊರೊನಾ ಸೋಂಕು ಬಂದಿತ್ತು. ನನ್ನಿಂದ ಬೇರೆಯವರಿಗೆ ಕೋವಿಡ್ ಹರಡಬಾರದು ಎಂಬ ಉದ್ದೇಶದಿಂದ ಮೊದಲು ಲಸಿಕೆಯನ್ನು ಪಡೆದುಕೊಂಡೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ