ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳು ರೇಸ್ನಲ್ಲಿದ್ದಾರೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್, ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್, ನೇಮಕಾತಿ ವಿಭಾಗದ ಡಿಜಿಪಿ ಕಮಲ್ಪಂತ್, ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ರೆಡ್ಡಿ ಹೆಸರು ಡಿಜಿ-ಐಜಿ ಹುದ್ದೆಗೆ ಮುನ್ನೆಲೆಗೆ ಬಂದಿವೆ.
ಪ್ರವೀಣ್ ಸೂದ್ ಮೇ 25ರೊಳಗೆ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ನಡುವಣ ಅವಧಿಯಲ್ಲಿಯೇ ನೂತನ ಸರಕಾರ ಸೂದ್ ಅವರ ಸ್ಥಾನಕ್ಕೆ ಮತ್ತೊಬ್ಬ ಅಧಿಕಾರಿಯನ್ನು ನೇಮಕಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸೇವಾ ಜೇಷ್ಠತೆ ಆಧಾರದಲ್ಲಿ ಡಾ. ಅಲೋಕ್ ಮೋಹನ್ ಅವರನ್ನೇ ಸರಕಾರ ಡಿಜಿ-ಐಜಿ ಹುದ್ದೆಗೆ ಪರಿಗಣಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಅವರ ನಂತರದ ಸ್ಥಾನದಲ್ಲಿ ರವೀಂದ್ರನಾಥ್, ಕಮಲ್ಪಂತ್, ಪ್ರತಾಪ್ರೆಡ್ಡಿ ಇದ್ದಾರೆ. ನಾಲ್ವರು ಅಧಿಕಾರಿಗಳ ಸೇವಾ ಜೇಷ್ಠತೆ, ಕಾರ್ಯವೈಖರಿ, ಸೇವಾ ಅನುಭವ ಆಧರಿಸಿ ಒಬ್ಬರ ಹೆಸರನ್ನು ಸರಕಾರ ಅಂತಿಮಗೊಳಿಸಲಿದೆ.
ಅಲೋಕ್ ಮೋಹನ್ ಹಿನ್ನೆಲೆ
ಬಿಹಾರ ಮೂಲದ ಡಾ. ಅಲೋಕ್ ಮೋಹನ್, 1987ನೇ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ. 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವ ಅವರು, ಹಾಲಿ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದಾರೆ. ಈ ಹಿಂದೆ ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸೇವಾ ಜೇಷ್ಠತೆ ಆಧಾರದಲ್ಲಿ ಡಿಜಿ-ಐಜಿ ಹುದ್ದೆಯ ಮೊದಲ ಆಯ್ಕೆಯಾಗಿದ್ದಾರೆ. 2025ರ ಏಪ್ರಿಲ್ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.
ಡಾ.ಪಿ. ರವೀಂದ್ರನಾಥ್
ಆಂಧ್ರ ಮೂಲದ ಡಾ.ಪಿ. ರವೀಂದ್ರನಾಥ್, 1990ರ ಬ್ಯಾಚ್ನ ಐಪಿಎಸ್ ಅಧಿಕಾರಿ. 33 ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಹಾಲಿ ತರಬೇತಿ ವಿಭಾಗದ ಡಿಜಿಪಿಯಾಗಿದ್ದಾರೆ. ಈ ವರ್ಷ ಸೆಪ್ಟೆಂಬರ್ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದು, ಅಲೋಕ್ ಮೋಹನ್ ನಂತರದ ಸ್ಥಾನದಲ್ಲಿ ಡಿಜಿ-ಐಜಿ ಹುದ್ದೆಯ ರೇಸ್ನಲ್ಲಿದ್ದಾರೆ.
ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ಪಂಥ್ ಹಾಗೂ ಹಾಲಿ ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ರೆಡ್ಡಿ ಕೂಡ ಡಿಜಿ-ಐಜಿ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.