ಆ್ಯಪ್ನಗರ

ಫೆಬ್ರವರಿಯಲ್ಲಿ ಜನರಿಗೆ ಜಲಧಾರೆ ಮಾಹಿತಿ: ಕುಮಾರಸ್ವಾಮಿ

ಜಲಧಾರೆಯ ಕಳಶ ವಾಹನ, ಯಾವ ಮಾರ್ಗ, ಜಲ ಸಂಗ್ರಹ ಇತ್ಯಾದಿ ಅಂಶಗಳ ಬಗ್ಗೆ ಮುಖಂಡರಿಗೆ ಮಾಹಿತಿ ನೀಡಿದ್ದೇವೆ. ಕೆಲ ಜಿಲ್ಲೆಗಳ ಮುಖಂಡರು ಗಂಗಾ ರಥಗಳು ಹೆಚ್ಚು ಸಮಯ ತಮ್ಮ ಭಾಗದಲ್ಲಿ ಸಂಚಾರ ಮಾಡಬೇಕು ಎಂದು ಕೇಳಿದ್ದಾರೆ. ಆ ಬಗ್ಗೆ ಕೂಡ ಚರ್ಚೆ ಮಾಡುತ್ತಿದ್ದೇನೆ

Vijaya Karnataka Web 19 Jan 2022, 7:40 pm
ಬೆಂಗಳೂರು: ಕೋವಿಡ್ ಕಾರಣದಿಂದ ಜನತಾ ಜಲಧಾರೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸೋಂಕಿನ ಪರಿಸ್ಥಿತಿಯನ್ನು ನೋಡಿಕೊಂಡು ಜಲಧಾರೆಯ ಹೊಸ ವೇಳಾಪಟ್ಟಿಯನ್ನು ಪ್ರಕಟ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.
Vijaya Karnataka Web ಎಚ್‌ಡಿಕೆ
ಎಚ್‌ಡಿಕೆ


ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಕೊರೊನಾ ಸೋಂಕಿನ ಬಗ್ಗೆ ಜನರು ಮತ್ತು ಸರಕಾರ ಎಚ್ಚರಿಕೆ ವಹಿಸಬೇಕು. ಜನರ ಪರಿಸ್ಥಿತಿ ಮತ್ತು ಜೀವನ ಎರಡರ ಮೇಲೂ ಗಮನಹರಿಸಬೇಕಾಗಿದೆ. ಸರಕಾರ ಸೂಕ್ತ ಕ್ರಮ ವಹಿಸಬೇಕು ಎಂದರು.

ಕೋವಿಡ್ ಏರಿಕೆ: ಜೆಡಿಎಸ್‌ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ

ಪಕ್ಷದಲ್ಲಿ ಕೆಲವು ಪ್ರಮುಖರ ಸಭೆ ಕರೆದಿದ್ದೇನೆ. ಪಕ್ಷ ಸಂಘಟನೆ ಕುರಿತು ಸಭೆ ನಡೆಯಲಿದೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ಕೂಡ ಈ ಸಭೆಯಲ್ಲಿ ಭಾಗಿಯಾಗಿದ್ದರು. ಜಲಧಾರೆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಜಲಧಾರೆಯ ಕಳಶ ವಾಹನ, ಯಾವ ಮಾರ್ಗ, ಜಲ ಸಂಗ್ರಹ ಇತ್ಯಾದಿ ಅಂಶಗಳ ಬಗ್ಗೆ ಮುಖಂಡರಿಗೆ ಮಾಹಿತಿ ನೀಡಿದ್ದೇವೆ. ಕೆಲ ಜಿಲ್ಲೆಗಳ ಮುಖಂಡರು ಗಂಗಾ ರಥಗಳು ಹೆಚ್ಚು ಸಮಯ ತಮ್ಮ ಭಾಗದಲ್ಲಿ ಸಂಚಾರ ಮಾಡಬೇಕು ಎಂದು ಕೇಳಿದ್ದಾರೆ. ಆ ಬಗ್ಗೆ ಕೂಡ ಚರ್ಚೆ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಮಾಹಿತಿ ನೀಡಿದರು.

ಮನೆ ಬಾಗಿಲಿಗೆ ಜಲಧಾರೆ ಮಾಹಿತಿ

ಜಲಧಾರೆ ಕಾರ್ಯಕ್ರಮವನ್ನು ನಮ್ಮ ಪಕ್ಷ ಅತ್ಯಂತ ವ್ಯವಸ್ಥಿತವಾಗಿ ಮಾಡುತ್ತಿದೆ. ಸಾಕಷ್ಟು ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಫೆಬ್ರವರಿ ಮೊದಲ ವಾರದಿಂದ ಜಲಧಾರೆ ಮಾಹಿತಿ ಜನರ ಮುಂದೆ ಇಡುತ್ತೇವೆ. ಹ್ಯಾಂಡ್ ಬಿಲ್ ಗಳನ್ನು ನೀಡಲಾಗುತ್ತದೆ. ಜತೆಗೆ ಬೇರೆ ಬೇರೆ ನಮೂನೆಗಳಲ್ಲಿ ಮಾಹಿತಿ ಕೊಡುತ್ತೇವೆ. ಜನರ ವಿಶ್ವಾಸ ಗಳಿಸಿ ಅವರ ಬೆಂಬಲದೊಂದಿಗೆ ಜಲಧಾರೆ ಕಾರ್ಯಕ್ರಮ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

ಹಾವೇರಿ ಜಿಲ್ಲಾ ಜೆಡಿಎಸ್ ಹಂಗಾಮಿ ಅಧ್ಯಕ್ಷರನ್ನಾಗಿ ಜಯಾನಂದ ಜಾವಣ್ಣನವರ ನೇಮಕ

ಜೆಡಿಎಸ್ ಪಕ್ಷದ ಹಾವೇರಿ ಜಿಲ್ಲಾ ಹಂಗಾಮಿ ಅಧ್ಯಕ್ಷರನ್ನಾಗಿ ಜಯಾನಂದ ಜಾವಣ್ಣನವರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ನೈಟ್‌ ಕರ್ಫ್ಯೂ, ವೀಕೆಂಡ್‌ ಕರ್ಫ್ಯೂನಿಂದ ಜನಕ್ಕೆ ತೊಂದರೆ ಆಗ್ತಿದೆ! ಎಚ್‌ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಕೆ.ಕುಮಾರಸ್ವಾಮಿ ಅವರು ಈ ನೇಮಕ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ