ಆ್ಯಪ್ನಗರ

2023ರ ಚುನಾವಣೆಗೆ ಜೆಡಿಎಸ್‌ ತಯಾರಿ; ರಾಮನಗರದಿಂದಲೇ ಸಂಘಟನೆ, ಚಾಲನೆ ಎಂದ ನಿಖಿಲ್

ಪಪಕ್ಷದ ರಾಷ್ಟ್ರೀಯ, ರಾಜ್ಯಾಧ್ಯಕ್ಷರು ನನಗೆ ಯುವ ಘಟಕದ ಜವಾಬ್ದಾರಿ ನೀಡಿದ್ದಾರೆ. ನನ್ನ ಮದುವೆ ಹಾಗೂ ಕೋವಿಡ್‌ ಕಾರಣದಿಂದ ಪಕ್ಷ ಸಂಘಟನೆ ಸಾಧ್ಯವಾಗಿರಲಿಲ್ಲ. ಶೀಘ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯೂ ಘೋಷಣೆಯಾಗುವ ಸಾಧ್ಯತೆಯಿದೆ.

Vijaya Karnataka Web 14 Nov 2020, 11:51 pm
ರಾಮನಗರ: ರಾಮನಗರ ಜಿಲ್ಲೆಯಿಂದಲೇ 2023ರ ವಿಧಾನಸಭೆ ಚುನಾವಣೆ ತಯಾರಿಗೆ ಚಾಲನೆ ನೀಡಲಾಗುತ್ತದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಘೋಷಿಸಿದರು.
Vijaya Karnataka Web ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ


ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿ,''ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಆಶ್ರಯ ನೀಡಿರುವ ಕಾರಣ ರಾಮನಗರ ಜಿಲ್ಲೆಯಿಂದಲೇ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ. ರಾಮನಗರ ಜಿಲ್ಲೆ ನಂತರ ಬೇರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುವ ವಿವರವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇನೆ. ಪಂಚಾಯಿತಿ ವಾರು ಪ್ರತಿಯೊಂದು ಹಳ್ಳಿಗೂ ಭೇಟಿ ನೀಡುತ್ತೇನೆ. ಯುವಕರನ್ನು ಸೇರಿಸಿಕೊಂಡು ಪಕ್ಷ ಸಂಘಟಿಸುತ್ತೇನೆ'' ಎಂದರು.

''ಪಕ್ಷದ ರಾಷ್ಟ್ರೀಯ, ರಾಜ್ಯಾಧ್ಯಕ್ಷರು ನನಗೆ ಯುವ ಘಟಕದ ಜವಾಬ್ದಾರಿ ನೀಡಿದ್ದಾರೆ. ನನ್ನ ಮದುವೆ ಹಾಗೂ ಕೋವಿಡ್‌ ಕಾರಣದಿಂದ ಪಕ್ಷ ಸಂಘಟನೆ ಸಾಧ್ಯವಾಗಿರಲಿಲ್ಲ. ಶೀಘ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯೂ ಘೋಷಣೆಯಾಗುವ ಸಾಧ್ಯತೆಯಿದೆ. ಆ ಹಿನ್ನೆಲೆ­ಯಲ್ಲಿಯೂ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುತ್ತೇವೆ'' ಎಂದರು.

''ಶಿರಾ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಏನೇ ಬಂದಿರಬಹುದು. ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಇತಿಹಾಸ ನೋಡಿದರೆ ಉಪ ಚುನಾವಣೆಗಳಲ್ಲಿ ಮತದಾರರ ಒಲವು ಸಹಜವಾಗಿಯೇ ಆಡಳಿತ ಪಕ್ಷದ ಪರವಾಗಿ ಇರುತ್ತದೆ. ಆದರೆ, ಶಿರಾ ಕ್ಷೇತ್ರ ಕಳೆದುಕೊಂಡಿದ್ದು ಮನಸ್ಸಿಗೆ ತುಂಬಾ ನೋವಾಗಿದೆ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದೇವೆ'' ಎಂದು ನಿಖಿಲ್ ಕುಮಾರಸ್ವಾಮಿ‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ