ಆ್ಯಪ್ನಗರ

ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ: ಯಡಿಯೂರಪ್ಪ

ಭಾರಿ ಮಳೆಯಿಂದ ಪ್ರವಾಹ ಪೀಡಿತ ಶಿವಮೊಗ್ಗ ಮತ್ತು ಸಾಗರಕ್ಕೆ ಮಂಗಳವಾರ ತೆರಳುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

Vijaya Karnataka Web 12 Aug 2019, 6:15 pm
ಮಂಗಳೂರು: ಭಾರಿ ಮಳೆಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಅಲ್ಲದೇ ಮನೆ ದುರಸ್ತಿ ಕಾರ್ಯಕ್ಕೆ 1 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಕ್ಕಾವು ಗ್ರಾಮದಲ್ಲಿ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಸಂತ್ರಸ್ತರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ಸಂಪೂರ್ಣ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ, ವಿತರಿಸಲಾಗುವುದು. ತಾತ್ಕಾಲಿಕ ಸದ್ಯಕ್ಕೆ 10 ಸಾವಿರ ರೂ. ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗೆ ಯಡಿಯೂರಪ್ಪ ಸೂಚಿಸಿದರು.

ಸಂತ್ರಸ್ತರು ಸದ್ಯಕ್ಕೆ ಬಾಡಿಗೆ ಮನೆಯಲ್ಲಿ ವಾಸಿಸಿದರೆ 5 ಸಾವಿರ ರೂಪಾಯಿ ನೆರವು ನೀಡಲಾಗುವುದು. ಮನೆ, ಮಠ ಇಲ್ಲದವರಿಗೆ ನಿವೇಶನ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ