ಆ್ಯಪ್ನಗರ

ಯೋಗ ದಿನ: ಬೆಂಗಳೂರು ಪದವಿ ವಿದ್ಯಾರ್ಥಿಗಳಿಗೆ ಹಾಜರಿ ಕಡ್ಡಾಯ

ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಜೂನ್‌ 21ರಂದು ನಡೆಯಲಿರುವ 'ಅಂತಾರಾಷ್ಟ್ರೀಯ ಯೋಗ ದಿನಾಚರಣೆ' ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಕಾಲೇಜು ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

Vijaya Karnataka 20 Jun 2018, 7:53 am
ಬೆಂಗಳೂರು : ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಜೂನ್‌ 21ರಂದು ನಡೆಯಲಿರುವ 'ಅಂತಾರಾಷ್ಟ್ರೀಯ ಯೋಗ ದಿನಾಚರಣೆ' ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಕಾಲೇಜು ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
Vijaya Karnataka Web Yoga Day


''ವಿಶ್ವಸಂಸ್ಥೆಯು ಜೂ.21ನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ದಿನವನ್ನಾಗಿ ಘೋಷಿಸಿದ್ದು, ದೇಶಾದ್ಯಂತ ಆಚರಿಸಲಾಗುತ್ತಿದೆ. ಬೆಳಗ್ಗೆ 7ರಿಂದ 8.30ರ ವರೆಗೆ ಯೋಗ ದಿನಾಚರಣೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಆದ್ದರಿಂದ ನಗರ ವ್ಯಾಪ್ತಿಯ ಎಲ್ಲಾ ಸರಕಾರಿ, ಖಾಸಗಿ ಅನುದಾನಿತ, ಅನುದಾನರಹಿತ ಪದವಿ ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳು ಹಾಗೂ ಎನ್‌ಸಿಸಿ, ಎನ್‌ಎಸ್‌ಎಸ್‌, ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ತಪ್ಪದೇ ಪಾಲ್ಗೊಳ್ಳುವಂತೆ,'' ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ