ಆ್ಯಪ್ನಗರ

ಭಿನ್ನಾಭಿಪ್ರಾಯ ಹತ್ತು ದಿನದಲ್ಲಿ ಶಮನ: ಡಿವಿಎಸ್‌

ಮಡಿಕೇರಿ ಕ್ಷೇತ್ರದ ಬಿಜೆಪಿ ವಲಯದಲ್ಲಿ ಅಸಮಾಧಾನ ವ್ಯಕ್ತಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ಹತ್ತು ದಿನಗಳ ಒಳಗಾಗಿ ಎಲ್ಲವನ್ನೂ ಸರಿಪಡಿಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

Vijaya Karnataka 16 Jan 2018, 5:00 am

ಸೋಮವಾರಪೇಟೆ: ಮಡಿಕೇರಿ ಕ್ಷೇತ್ರದ ಬಿಜೆಪಿ ವಲಯದಲ್ಲಿ ಅಸಮಾಧಾನ ವ್ಯಕ್ತಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ಹತ್ತು ದಿನಗಳ ಒಳಗಾಗಿ ಎಲ್ಲವನ್ನೂ ಸರಿಪಡಿಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ಇಲ್ಲಿನ ನಿರೀಕ್ಷ ಣಾ ಮಂದಿರದಲ್ಲಿ ಪಕ್ಷ ದ ಮುಖಂಡರೊಡನೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷ ಅಮಿತ್‌ಷಾ ಅವರ ಆದೇಶದಂತೆ ಇತರ ಪಕ್ಷ ಗಳಿಂದ ವಲಸೆ ಬರುವ ಎಲ್ಲರನ್ನು ಪಕ್ಷ ಕ್ಕೆ ಸೇರಿಸಿಕೊಳ್ಳಿ. ಆದರೆ, ಚುನಾವಣೆಯ ನಂತರ ಎಲ್ಲರಿಗೂ ಸೂಕ್ತ ಸ್ಥಾನ ಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಒಂದೇ ವೇದಿಕೆಯಲ್ಲಿ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಬೇಕು ಎಂದು ಸಲಹೆ ನೀಡಿದರು.

ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ಪಕ್ಷ ಕ್ಕಾಗಿ ದುಡಿದ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಕರೆದುಕೊಂಡು ಹೋಗಬೇಕಾಗಿದೆ. ಪಕ್ಷ ದಿಂದ ಯಾವುದೇ ಸಮಾವೇಶ, ಕಾರ್ಯಕ್ರಮಗಳು ನಡೆದರೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಪಕ್ಷ ದಲ್ಲಿ ಯಾವುದೇ ಭಿನ್ನಮತ ಇಲ್ಲ. ಎಲ್ಲವನ್ನು ರಾಜ್ಯ ನಾಯಕರು ಜಿಲ್ಲಾ ಮುಖಂಡರೊಂದಿಗೆ ಚರ್ಚಿಸಿ ಇತ್ಯರ್ಥ ಪಡಿಸಲಾಗುವುದು ಎಂದು ಹೇಳಿದ್ದಾರೆ.

ಶಾಸಕರಾದ ಅಪ್ಪಚ್ಚು ರಂಜನ್‌, ಕೆ.ಜಿ. ಬೋಪಯ್ಯ, ಸುನೀಲ್‌ ಸುಬ್ರಮಣಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌.ಜಿ. ಮೇದಪ್ಪ , ಪ್ರಮುಖರಾದ ಬಗ್ಗನ ಜೋಯಪ್ಪ, ಕೃಷಿಕ ಸಮಾಜದ ಅಧ್ಯಕ್ಷ ಎಸ್‌.ಪಿ. ಪೊನ್ನಪ್ಪ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ