Please enable javascript.ಭಾರತ ಸಂವಿಧಾನದ ಅರಿವಿರಬೇಕು: ಆಶಯ - ಭಾರತ ಸಂವಿಧಾನದ ಅರಿವಿರಬೇಕು: ಆಶಯ - Vijay Karnataka

ಭಾರತ ಸಂವಿಧಾನದ ಅರಿವಿರಬೇಕು: ಆಶಯ

ವಿಕ ಸುದ್ದಿಲೋಕ 11 Jul 2013, 8:33 pm
Subscribe

ದೇಶದ ಸಂವಿಧಾನ ಮತ್ತು ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಅರಿವು ಮೂಡಿಸುವಂತೆ ಜಿಲ್ಲಾ ಮತ್ತು ಸತ್ರ್ತ ನ್ಯಾಯಾಧೀಶ ಎಸ್.ಆರ್.ಸೋಮಶೇಖರ ಹೇಳಿದ್ದಾರೆ.

ಭಾರತ ಸಂವಿಧಾನದ ಅರಿವಿರಬೇಕು: ಆಶಯ
ಮಡಿಕೇರಿ: ದೇಶದ ಸಂವಿಧಾನ ಮತ್ತು ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಅರಿವು ಮೂಡಿಸುವಂತೆ ಜಿಲ್ಲಾ ಮತ್ತು ಸತ್ರ್ತ ನ್ಯಾಯಾಧೀಶ ಎಸ್.ಆರ್.ಸೋಮಶೇಖರ ಹೇಳಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ಸಮಾಜ ವಿಜನ ಶಿಕ್ಷಕರಿಗಾಗಿ ನಗರದ ಸಂತ ಮೈಕಲರ ಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರೌಢಶಾಲಾ ಹಂತದ ಸಮಾಜ ವಿಜನ ಪಠ್ಯ ವಿಷಯದಲ್ಲಿ ಸಂವಿಧಾನದ ಹಲವು ವಿಷಯಗಳನ್ನು ಅಳವಡಿಸಲಾಗಿದೆ. ಅದೇ ರೀತಿ ಕಾನೂನಿಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಕಾನೂನಿನ ಬಗ್ಗೆ ಅರಿವು ಉಂಟು ಮಾಡುವುದು. ಉಚಿತ ಕಾನೂನು ನೆರವು ಮತ್ತು ಸಲಹೆಗಳನ್ನು ಕೊಡುವುದು. ಜನತಾ ನ್ಯಾಯಾಲಯಗಳ (ಲೋಕಾದಲತ್) ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಜನರಿಗೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡುವುದು ಕಾನೂನು ಪ್ರಾಧಿಕಾರದ ಉದ್ದೇಶವಾಗಿದೆ ಎಂದರು.

ಕಾನೂನು ಸೇವೆ: ಪರಿಶಿಷ್ಟರು, ಮಹಿಳೆಯರು ಮತ್ತು ಮಕ್ಕಳು, ಹಿಂದುಳಿದವರು ಮತ್ತಿತರರಿಗೆ ಉಚಿತ ಕಾನೂನು ಸೇವೆ ಮತ್ತು ಸಲಹೆಗಳನ್ನು ನೀಡಲಾಗುತ್ತಿದೆ ಎಂದು ಎಸ್.ಆರ್.ಸೋಮಶೇಖರ್ ಅವರು ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಮಾತನಾಡಿ, ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಕಾನೂನು ಅರಿವು ಅತ್ಯಗತ್ಯ. ಆ ನಿಟ್ಟಿನಲ್ಲಿ ಸಮಾಜ ವಿಜನ ಶಿಕ್ಷಕರು ಮಕ್ಕಳಿಗೆ ಕಾನೂನಿನ ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣ ಮಾಡಲು ಪಣತೊಡುವಂತೆ ಸಲಹೆ ಮಾಡಿದರು.

ವಕೀಲರ ಸಂಘದ ಅಧ್ಯಕ್ಷ ಕೆ.ಡಬ್ಲ್ಯು. ಬೋಪಯ್ಯ ಮಾತನಾಡಿ, ಸಮಾಜದ ಪ್ರತಿಯೊಬ್ಬರಿಗೂ ಸಂವಿಧಾನದ ಆಶಯದಂತೆ ಕಾನೂನು ತಲುಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು. ಕಾನೂನಿನ ಅರಿವು ಮತ್ತು ನೆರವು ಲಭ್ಯವಾಗುವಂತಾಗಬೇಕು ಎಂದು ಅಭಿಪ್ರಾಯ ಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್. ಬಸವರಾಜು ಮಾತನಾಡಿ, ಅರಿವೇ ಗುರು. ಗುರು ಅರಿವಿನ ಹರಿಕಾರ. ಗುರು ಹೆಚ್ಚು ಅರಿತುಕೊಂಡಾಗ ಮಕ್ಕಳಿಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯ. ಆ ದಿಸೆಯಲ್ಲಿ ಕಾನೂನಿನ ಬಗ್ಗೆ ಕಾರ್ಯಾಗಾರದಲ್ಲಿ ಮಾಹಿತಿ ಪಡೆದು ಮಕ್ಕಳಿಗೆ ತಿಳಿಸುವಂತಾಗಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಿಗೆ ಶಿಕ್ಷಣ: ಶಿಕ್ಷಣವು ಬೌದ್ಧಿಕ, ಭಾವನಾತ್ಮಕ, ನೈತಿಕ ಮತ್ತು ವಿಕಸನ ಹೊಂದಿ ಸಮಾಜದ ಆಸ್ತಿಯಾಗಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸು ವಂತಾಗಬೇಕು ಎಂದು ಹೇಳಿದರು.
ವಕೀಲ ಎಂ.ಎ. ನಿರಂಜನ್ ವಿದ್ಯಾರ್ಥಿ ಗಳಲ್ಲಿ ಕಾನೂನು ಹಾಗೂ ಬಾಲಾಪರಾಧದ ಬಗ್ಗೆ ಉಪನ್ಯಾಸ ನೀಡಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ. ಇದರಿಂದ ಕುಟುಂಬದಲ್ಲಿನ ಕಾನೂನು ತೊಡಕು ಎದುರಿಸಲು ಸಮರ್ಥರಾಗುತ್ತಾರೆ ಎಂದರು. ವಕೀಲ ಕೆ.ಎಂ.ಮೀನಾ ಕುಮಾರಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಲೈಂಗಿಕ ದುರ್ಬಳಕೆಯಿಂದ ಮಕ್ಕಳ ಸಂರಕ್ಷಣೆ ಮತ್ತು ಪಿ.ಯು. ಪ್ರೀತಂ ಮಕ್ಕಳ ಹಕ್ಕುಗಳು, ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ಸಂರಕ್ಷಣೆ) ಬಗ್ಗೆ ಉಪನ್ಯಾಸ ನೀಡಿದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ