ಆ್ಯಪ್ನಗರ

ಅಬ್ಬಾ, ಬುಧವಾರ ಮಳೆ ಸುರಿಯಿತು !

ವಿಕ ಸುದ್ದಿಲೋಕ, ಮಡಿಕೇರಿ ಕಳೆದ ಕೆಲವು ದಿನಗಳಿಂದ ಮುನಿಸಿಕೊಂಡಂತ್ತಿದ್ದ ವರುಣ ಇದೀಗ ಜಿಲ್ಲೆಯಾದ್ಯಂತ ಮತ್ತೆ ತನ್ನ ರಭಸ ತೋರುತ್ತಿದೆ...

ವಿಕ ಸುದ್ದಿಲೋಕ 21 Jul 2016, 4:00 am
ಎರಡ್ಮೂರು ದಿನದ ಬಿಸಿಲಿನ ವಾತಾವರಣ ತೇವವಾಯಿತು...

Vijaya Karnataka Web abba varunanata started again
ಅಬ್ಬಾ, ಬುಧವಾರ ಮಳೆ ಸುರಿಯಿತು !

ಮಡಿಕೇರಿ: ಕಳೆದ ಕೆಲವು ದಿನಗಳಿಂದ ಮುನಿಸಿಕೊಂಡಂತ್ತಿದ್ದ ವರುಣ ಇದೀಗ ಜಿಲ್ಲೆಯಾದ್ಯಂತ ಮತ್ತೆ ತನ್ನ ರಭಸ ತೋರುತ್ತಿದೆ. ಬುಧವಾರ ಬೆಳಗ್ಗೆನಿಂದಲೇ ಮಡಿಕೇರಿ ಸೇರಿದಂತೆ ಜಿಲ್ಲೆಯ ನಾನಾ ಕಡೆ ಉತ್ತಮ ಮಳೆಯಾಗಿದೆ.

ಜಿಲ್ಲೆಯ ಬುಧವಾರದ ಸರಾಸರಿ ಮಳೆ 2.86 ಮಿ.ಮೀ. ಕಳೆದ ವರ್ಷ ಇದೇ ದಿನ 40.67 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1068.13 ಕಳೆದ ವರ್ಷ ಇದೇ ಅವಧಿಯಲ್ಲಿ 1428.16 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.6 ಮಿ.ಮೀ. ಕಳೆದ ವರ್ಷ ಇದೇ ದಿನ 74 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1586.62 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2060.65 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.98 ಮಿ.ಮೀ. ಕಳೆದ ವರ್ಷ ಇದೇ ದಿನ 20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 791.9 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1225.44 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 28 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 825.87ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 998.33 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 4.4, ನಾಪೋಕ್ಲು 3, ಸಂಪಾಜೆ 3.8, ಭಾಗಮಂಡಲ 11.2, ವಿರಾಜಪೇಟೆ ಕಸಬಾ 1.8, ಹುದಿಕೇರಿ 2.5, ಅಮ್ಮತ್ತಿ 1ಮಿ.ಮೀ. ಮಳೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ