ಆ್ಯಪ್ನಗರ

ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ

ಇಲ್ಲಿಗೆ ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವನಾಡು ಗ್ರಾಮದಲ್ಲಿರುವ ಗಿರಿಜನ ಆಶ್ರಮ ವಸತಿ ಶಾಲೆಯ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್‌ ಭೂಮಿಪೂಜೆ ನೆರವೇರಿಸಿದರು.

Vijaya Karnataka Web 21 Feb 2019, 5:00 am
ಕುಶಾಲನಗರ
Vijaya Karnataka Web additional room construction started
ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ


ಇಲ್ಲಿಗೆ ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವನಾಡು ಗ್ರಾಮದಲ್ಲಿರುವ ಗಿರಿಜನ ಆಶ್ರಮ ವಸತಿ ಶಾಲೆಯ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್‌ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಸರಕಾರದಿಂದ ಗಿರಿಜನ ಆಶ್ರಮ ವಸತಿ ಶಾಲೆಗಳಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದ್ಬಳಸಿಕೊಂಡು, ಶೈಕ್ಷ ಣಿಕ ಉನ್ನತಿ ಕಾಣುವಂತಾಗಬೇಕು.

ಶಾಸಕರ ಅನುದಾನದಲ್ಲಿಯೂ ತಾಲೂಕಿನ ವಸತಿ ಶಾಲೆಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವ ಜತೆಗೆ ಕಟ್ಟಡ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಯಡವನಾಡು ಗಿರಿಜನ ಆಶ್ರಮ ವಸತಿ ಶಾಲೆಗೆ 60 ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಇದೀಗ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದರು.

ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್‌, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪೂರ್ಣಿಮಾ ಗೋಪಾಲ್‌, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ತಂಗಮ್ಮ, ತಾಲೂಕು ಪಂಚಾಯಿತಿ ಸದಸ್ಯರಾದ ಸಬಿತಾ ಚನ್ನಕೇಶವ್‌, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶಿವಕುಮಾರ್‌, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಶೇಖರ್‌ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ