ಆ್ಯಪ್ನಗರ

ಕೊಡಗು: ಕೊಟ್ಟಮುಡಿಯಲ್ಲಿ ಪಕ್ಷಿಗಳ ಅಸಹಜ ಸಾವು

ಕೊಡಗು ಜಿಲ್ಲೆಯ ಕೊಟ್ಟಮುಡಿಯಲ್ಲಿ ಪಕ್ಷಿಗಳ ಅಸಹಜ ಸಾವು ಸಂಭವಿಸಿದ್ದು, ಮರಣಿಸಿದ ಕಾಗೆಗಳು ಹಾಗೂ ಕೊಕ್ಕರೆಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸತ್ತ ಪಕ್ಷಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

Vijaya Karnataka Web 24 Mar 2020, 8:21 am
ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೊಟ್ಟಮುಡಿಯಲ್ಲಿ ಮಾ. 19ರಂದು ಸುಮಾರು 50 ಕಾಗೆಗಳು ಅಸಹಜವಾಗಿ ಮರಣ ಹೊಂದಿರುವ ಬಗ್ಗೆ ವರದಿಯಾಗಿದ್ದು, ಅದೇ ರೀತಿ ಮಾ. 21ರಂದು ಚೆರಿಯ ಪರಂಬುವಿನಲ್ಲಿ 4 ಕೊಕ್ಕರೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ.
Vijaya Karnataka Web bird deaths


ಈಗಾಗಲೇ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಪಶುವೈದ್ಯರು ಈ ಸ್ಥಳಕ್ಕೆ ಭೇಟಿ ನೀಡಿದ್ದು, ಮರಣಿಸಿದ ಕಾಗೆಗಳು ಹಾಗೂ ಕೊಕ್ಕರೆಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹಾಗೂ ಸತ್ತ ಪಕ್ಷಿಗಳ ಮಾದರಿಗಳನ್ನು ಸಹ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುತ್ತದೆ. ಪ್ರಯೋಗಾಲಯದಿಂದ ವರದಿಯ ನಿರೀಕ್ಷೆಯಲ್ಲಿದ್ದು, ವರದಿ ಬಂದ ನಂತರವಷ್ಟೆ ಮುಂದಿನ ಕ್ರಮ ವಹಿಸಲಾಗುವುದು, ಸದ್ಯದ ಪರಿಸ್ಥಿತಿಯಲ್ಲಿ ಜನತೆ ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ