ಆ್ಯಪ್ನಗರ

ಬಂದ್‌ಗೆ ಕೊಡಗಿನಲ್ಲಿ ನೀರಸ ಪ್ರತಿಕ್ರಿಯೆ

ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌ಗೆ ಮೊದಲ ದಿನ ಕೊಡಗಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

Vijaya Karnataka 9 Jan 2019, 5:00 am
ಮಡಿಕೇರಿ: ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌ಗೆ ಮೊದಲ ದಿನ ಕೊಡಗಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
Vijaya Karnataka Web MDK-mdk8jay12


ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಒಟ್ಟು 12 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಂಗಳವಾರ ಹಾಗೂ ಬುಧವಾರ ಕರೆ ನೀಡಿರುವ ಬಂದ್‌ನಿಂದ ಮಂಗಳವಾರ ಜಿಲ್ಲೆಯ ಜನಜೀವನದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಉಂಟಾಗಲಿಲ್ಲ.

ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ರಾಷ್ಟ್ರ ವ್ಯಾಪ್ತಿ ಮುಷ್ಕರದ ಕರೆಯಂತೆ ಕೊಡಗು ಜಿಲ್ಲೆಯಲ್ಲಿರುವ ವಿವಿಧ ಕಾರ್ಮಿಕ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದನ್ನು ಹೊರತು ಪಡಿಸಿದರೆ ನಗರದಲ್ಲಿ ಬಂದ್‌ ವಾತಾವರಣ ಕಂಡು ಬರಲಿಲ್ಲ.

ಖಾಸಗಿ ಬಸ್‌ಗಳು, ಆಟೊ, ಟ್ಯಾಕ್ಸಿ ಎಂದಿನಂತೆ ಸಂಚರಿಸಿದವು. ಮುಂಜಾನೆ ಕೆಲಕಾಲ ಸರಕಾರಿ ಬಸ್‌ ಸಂಚಾರ ರದ್ದಾಗಿತ್ತು. ಆದರೆ, 11 ಗಂಟೆ ನಂತರ ಕೆಎಸ್‌ಆರ್‌ಟಿಸಿ ಸ್ಥಳೀಯವಾಗಿ ಸಂಚಾರ ನಡೆಸಿದವು. ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಗೆ ಯಾವುದೇ ಸರಕಾರಿ ಬಸ್‌ ಓಡಾಟ ಕಂಡು ಬರಲಿಲ್ಲ.

ಇನ್ನೂ ಜಿಲ್ಲೆಯ ನಾನಾ ಅಂಗಡಿ ಮುಂಗಟ್ಟುಗಳು ಕೂಡ ಮುಂಜಾನೆಯಿಂದಲೇ ಎಂದಿನಂತೆ ತೆರೆದಿದ್ದು, ವ್ಯಾಪಾರ ವಹಿವಾಟು ನಡೆಯಿತು.

ಪರಿಸ್ಥಿತಿ ಅವಲೋಕಿಸಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿತ್ತು. ಆದರೆ, ಜಿಲ್ಲೆಯಲ್ಲಿ ಬಂದ್‌ ಬಿಸಿ ಇಲ್ಲದ ಕಾರಣ ಜಿಲ್ಲಾಡಳಿತ ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡದ ಕಾರಣ ಎಂದಿನಂತೆ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಿದ್ದರು. ಉಳಿದಂತೆ ಪೆಟ್ರೋಲ್‌ ಬಂಕ್‌, ಚಿತ್ರಮಂದಿರ, ಹೋಟೆಲ್‌, ಆಸ್ಪತ್ರೆ, ಔಷಧ, ಹಾಲು ತರಕಾರಿ ಅಂಗಡಿ ಎಂದಿನಂತೆ ಕಾರ್ಯನಿರ್ವಹಿಸಿದವು.

ಒಟ್ಟಾರೆ ಕೇಂದ್ರ ಕಾರ್ಮಿಕ ಸಂಘಟನೆಯಗಳು ಕರೆ ನೀಡಿದ್ದ ಭಾರತ್‌ ಬಂದ್‌ಗೆ ಜಿಲ್ಲೆಯಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಇನ್ನು ಎರಡನೇ ದಿನದ ಬಂದ್‌ನಿಂದಲೂ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗುವ ಸಾಧ್ಯತೆಗಳಿಲ್ಲ.

ಪ್ರತಿಭಟನಾ ಮೆರವಣಿಗೆ

ದೇಶದ ಹತ್ತು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜ. 9 ರಂದು ಕರೆ ನೀಡಿರುವ ರಾಷ್ಟ್ರ ವ್ಯಾಪ್ತಿ ಮುಷ್ಕರದ ಕರೆಯಂತೆ ಕೊಡಗು ಜಿಲ್ಲೆಯಲ್ಲಿರುವ ವಿವಿಧ ಕಾರ್ಮಿಕ ಸಂಘಟನೆಗಳು ಕೂಡ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಜ.9 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿಯ ಚೌಕಿ ವೃತ್ತದಿಂದ (ಇಂದಿರಾ ಗಾಂಧಿ ವೃತ್ತ) ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿಯ ಪ್ರಮುಖರು ಹಾಗೂ ಅಂಗನವಾಡಿ ಸಂಘಟನೆಯ ಮುಖಂಡ ಟಿ.ಪಿ.ರಮೇಶ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ