ಆ್ಯಪ್ನಗರ

ಕೊಡಗಿನಲ್ಲಿ ಮತ್ತೆ 13 ಕೊರೊನಾ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 238ಕ್ಕೆ ಏರಿಕೆ

ಕೊಡಗಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಸಾಗುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 13 ಕೋವಿಡ್‌ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 238ಕ್ಕೆ ಏರಿಕೆಯಾಗಿದೆ.

Vijaya Karnataka Web 16 Jul 2020, 12:43 pm
ಕೊಡಗು: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 13 ಕೋವಿಡ್‌ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 238ಕ್ಕೆ ಏರಿಕೆಯಾಗಿದೆ. 120 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 102 ನಿಯಂತ್ರಿತ ಪ್ರದೇಶಗಳಿವೆ. ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
Vijaya Karnataka Web ಸಾಂದರ್ಭಿಕ ಚಿತ್ರ


ಜಿಲ್ಲೆಯಲ್ಲಿ ಹೊರಗಿನಿಂದ ಬರುವವರಿಗೆ ಸಂಪರ್ಕ ತಡೆ ನಿಯಮಗಳನ್ನು ರೂಪಿಸಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ವಿದೇಶದಿಂದ ಆಗಮಿಸಿದವರು 7 ದಿನಗಳ ಸಾಂಸ್ಥಿಕ ತಡೆ, 7 ದಿನಗಳು ಗೃಹ ಸಂಪರ್ಕ ತಡೆ, ಹೊರ ರಾಜ್ಯದಿಂದ ಆಗಮಿಸಿದವರು 14 ದಿನಗಳ ಗೃಹ ಸಂಪರ್ಕ ತಡೆ, ಹೊರ ಜಿಲ್ಲೆಗಳಿಂದ ಆಗಮಿಸಿದವರು 7 ದಿನಗಳ ಕಾಲ ಗೃಹ ಸಂಪರ್ಕ ತಡೆಯಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಸೂಚಿಸಲಾಗಿದೆ. ಸ್ಥಳೀಯ ಆಡಳಿತಕ್ಕೆ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

ಜಿಲ್ಲೆಯಲ್ಲಿ ಸಂಪರ್ಕ ತಡೆ ನಿಯಮದ ಉಲ್ಲಂಘನೆ ಕಂಡು ಬಂದಲ್ಲಿ ಸಾರ್ವಜನಿಕರು ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡಬೇಕು. ಅಲ್ಲದೆ ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ ಅಥವಾ ಜನಪ್ರತಿನಿಧಿಗಳನ್ನು ಒಳಗೊಂಡ ಗ್ರಾಮ ಮಟ್ಟದ ಟಾಸ್ಕ್‌ ಫೋರ್ಸ್‌ ಸಮಿತಿ ಗಮನಕ್ಕೆ ತರಬೇಕು ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ