ಆ್ಯಪ್ನಗರ

ಕೊಡಗು: ಪಡಿತರ ಚೀಟಿ ಇಲ್ಲದ ಬಡವರಿಗೆ ಪಡಿತರ ವಿತರಣೆ

ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು ಹಾಗೂ ಬಡವರಿಗೆ ಪಡಿತರವನ್ನು ವಿತರಣೆ ಮಾಡಲಾಯಿತು. ಹಸಿದ ಹೊಟ್ಟೆಗೆ ತಣಿವು ಪೆಟ್ಟಿಗೆ ಹಾಗೂ ದಾನಿಗಳಿಂದ ಸಂಗ್ರಹವಾದ ಆಹಾರವನ್ನು ದಾಸ್ತಾನು ಮಾಡಲಾಗುತ್ತಿದ್ದು, ಇದನ್ನು ಬಡವರಿಗೆ ನೀಡಲಾಗುತ್ತಿದೆ.

Vijaya Karnataka Web 2 Apr 2020, 1:05 pm
ಮಡಿಕೇರಿ: ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು ಹಾಗೂ ಬಡವರಿಗೆ ಪಡಿತರವನ್ನು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ಕೆ.ಜಿ ಬೋಪಯ್ಯ ಗುರುವಾರ ವಿತರಿಸಿದರು.
Vijaya Karnataka Web kodagu ration distribution


ನಗರದ ಅಂಬೇಡ್ಕರ್ ಭವನದಲ್ಲಿ ಹಸಿದ ಹೊಟ್ಟೆಗೆ ತಣಿವು ಪೆಟ್ಟಿಗೆ ಹಾಗೂ ದಾನಿಗಳಿಂದ ಸಂಗ್ರಹವಾದ ಆಹಾರವನ್ನು ದಾಸ್ತಾನು ಮಾಡಲಾಗುತ್ತಿದ್ದು, ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು ಮತ್ತು ಬಡವರಿಗೆ ಪಡಿತರವನ್ನು ವಿತರಿಸಲಾಗುತ್ತಿದೆ.

ನಗರದ ಅಂಬೇಡ್ಕರ್ ಭವನದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಮೇಕೇರಿ ಮತ್ತು ಹಾಕತ್ತೂರು ಗ್ರಾ.ಪಂ ವ್ಯಾಪ್ತಿಯಲ್ಲಿ‌ ಕೆ.ಜಿ ಬೋಪಯ್ಯ, ಕೆ.ನಿಡುಗಣೆ ಗ್ರಾ.ಪಂ ವ್ಯಾಪ್ತಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ ಪಡಿತರ ವಿತರಿಸಿದರು.

ಕುಟುಂಬಕ್ಕೆ 10ಕೆ.ಜಿ ಅಕ್ಕಿ,1 ಕೆ.ಜಿ ಬೇಳೆ, 1 ಕೆಜಿ ಸಕ್ಕರೆ, 1 ಕೆಜಿ ಉಪ್ಪು, 2 ಕೆ.ಜಿ ಗೋಧಿ, 1 ಲೀಟರ್ ಅಡುಗೆ ಎಣ್ಣೆಯನ್ನು ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು ಹಾಗೂ ಬಡವರಿಗೆ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ರಾಜು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ