ಆ್ಯಪ್ನಗರ

ಜಾನಪದ ಸೊಗಡಿನಲ್ಲಿ ಅಡಗಿದೆ ಸಂಸ್ಕೃತಿ

ಮಡಿಕೇರಿ: ಸಂಸ್ಕೃತಿಯ ಉಳಿವು ಯುವ ಪೀಳಿಗೆಯ ಕೈಯಲ್ಲಿದೆ ಎಂದು ಸಹಕಾರಿ ತರಬೇತಿ ಕೇಂದ್ರದ ಪ್ರಾಶುಂಪಾಲೆ ರೇಣುಕಾ ಅಭಿಪ್ರಾಯಪಟ್ಟರು.

ವಿಕ ಸುದ್ದಿಲೋಕ 29 Feb 2016, 4:16 am
ಮಡಿಕೇರಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಂ.ಎನ್. ನಟರಾಜ್ ಮಡಿಕೇರಿ: ಸಂಸ್ಕೃತಿಯ ಉಳಿವು ಯುವ ಪೀಳಿಗೆಯ ಕೈಯಲ್ಲಿದೆ ಎಂದು ಸಹಕಾರಿ ತರಬೇತಿ ಕೇಂದ್ರದ ಪ್ರಾಶುಂಪಾಲೆ ರೇಣುಕಾ ಅಭಿಪ್ರಾಯಪಟ್ಟರು.
Vijaya Karnataka Web folk culture is lies in dorps kodagu
ಜಾನಪದ ಸೊಗಡಿನಲ್ಲಿ ಅಡಗಿದೆ ಸಂಸ್ಕೃತಿ

ನೆಹರು ಯುವ ಕೇಂದ್ರ ಕೊಡಗು, ಜಿಲ್ಲಾ ಯುವ ಒಕ್ಕೂಟ ಹಾಗೂ ಮೂರು ತಾಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.
ಯುವ ಪೀಳಿಗೆಯಲ್ಲಿ ನಿರ್ಧಿಷ್ಟ ಗುರಿ ಇರಬೇಕು. ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಪ್ರಯೋಜನ ವಾಗಲಿದೆ. ಸಾಂಸ್ಕೃತಿಕ ಕ್ಷೇತ್ರ ಬಹುಪಯೋಗ ವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರು ಸಲಹೆ ನೀಡಿದರು.
ಎಲ್ಲರೂ ವೈಯಕ್ತಿಕವಾಗಿ ಆಲೋಚಿಸುತ್ತಾ ರೆಯೇ ಹೊರತು, ಇತರರಿಗೆ ಸಹಕಾರಿಯಾಗಬೇಕು ಎಂದು ಬಯಸುವುದಿಲ್ಲ. ಸಹಕಾರಿ ಕ್ಷೇತ್ರದಲ್ಲಿ ಇಂದೂ ಉತ್ತಮ ಅವಕಾಶಗಳಿವೆ. ಅವುಗಳ ಬಗ್ಗೆ ಮಾಹಿತಿ ಪಡೆದು ಅದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್ ನಟರಾಜ್ ಮಾತನಾಡಿ, ದೇಶದಲ್ಲಿ ಶೇ.25 ರಷ್ಟು ಯುವ ಪೀಳಿಗೆಯಿದೆ. ಆದರೂ ಕೂಡ ಯುವ ಪೀಳಿಗೆ ಇಂದು ಉತ್ತಮ ಕೆಲಸ ಕಾರ್ಯ ಮಾಡಲು ಮುಂದೆ ಬರುತ್ತಿಲ್ಲ ಎಂದು ವಿಷಾಧ ವ್ಯಕ್ತ ಪಡಿಸಿದರು.
ಯುವ ಶಕ್ತಿಯನ್ನು ಬೆಳೆಸುವ ಸಲುವಾಗಿ ನೆಹರು ಯುವ ಕೇಂದ್ರವನ್ನು ಸ್ಥಾಪಿಸಲಾಗಿದೆ. ಕ್ರೀಡೆ , ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವುದು ನೆಹರು ಕೇಂದ್ರದ ಉದ್ದೇಶ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಯುವ ಒಕ್ಕೂಟದ ಸಹಕಾರ ದೊಂದಿಗೆ ಹಲವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಂಸ್ಕೃತಿ ಹಳ್ಳಿಗಾಡಿನ ಜಾನಪದ ಸೊಗಡಿನಲ್ಲಿ ಅಡಗಿದೆ. ಆದರೆ ಇಂದು ಬಹುತೇಕ ಜಾನಪದ ಕಲೆಗಳು ನಶಿಸಿಹೋಗುತ್ತಿವೆ ಎಂದು ವಿಷಾಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕುಡೆಕಲ್ ಸಂತೋಷ್ ಮಾತನಾಡಿ ಎಲ್ಲರಲ್ಲೂ ಪ್ರತಿಭೆಗಳಿರುತ್ತದೆ. ಅದನ್ನು ಹೊರ ತರಲು ವೇದಿಕೆ ಬೇಕು. ನೆಹರು ಯುವ ಕೇಂದ್ರ ಆ ನಿಟ್ಟಿನಲ್ಲಿ ಉತ್ತಮ ಕಾರ್ಯವನ್ನು ಮಾಡುತ್ತಿದೆ. ಇದನ್ನು ಕಲಾವಿದರು ಉಪಯೋಗಿಸಿಕೊಳ್ಳಬೇಕು. ಕಲೆಯನ್ನು ಪ್ರೋತ್ಸಾಹಿಸುವುದ ಜತೆಗೆ ಇತರರಿಗೂ ಅದನ್ನು ಕಲಿಸುವ ಪ್ರಯತ್ನ ಮಾಡಿ ಎಂದು ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಎಂ.ಬಿ ಜೋಯ್ಯಪ್ಪ, ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ಐಮುಡಿಯಂಡ ರಾಣಿ ಮಾಚಯ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಹಲವು ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು .

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ