ಆ್ಯಪ್ನಗರ

ಪ್ರಕೃತಿ ಆರಾಧನೆಯಿಂದ ಉತ್ತಮ ಪರಿಸರ

ಪ್ರಕೃತಿಯ ಆರಾಧನೆಯಿಂದ ಉತ್ತಮ ಪರಿಸರ ನಿರ್ಮಾಣ ಸಾಧ್ಯ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಹೇಳಿದರು.

Vijaya Karnataka 28 Aug 2018, 5:00 am
ಕುಶಾಲನಗರ
Vijaya Karnataka Web good environment possible through nature worship
ಪ್ರಕೃತಿ ಆರಾಧನೆಯಿಂದ ಉತ್ತಮ ಪರಿಸರ


ಪ್ರಕೃತಿಯ ಆರಾಧನೆಯಿಂದ ಉತ್ತಮ ಪರಿಸರ ನಿರ್ಮಾಣ ಸಾಧ್ಯ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಹೇಳಿದರು.

ಅಯ್ಯಪ್ಪಸ್ವಾಮಿ ದೇವಾಲಯ ಬಳಿ ನೂಲ ಹುಣ್ಣಿಮೆ ಅಂಗವಾಗಿ ಕಾವೇರಿ ಮಹಾ ಆರತಿ ಬಳಗದಿಂದ ನಡೆದ 84ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ನದಿ ಪರಿಸರಗಳನ್ನು ಅತಿಯಾಗಿ ಬಳಕೆ ಮಾಡುವುದರಿಂದ ಪ್ರಾಕೃತಿಕ ವಿಕೋಪಕ್ಕೆ ಆಹ್ವಾನ ನೀಡಿದಂತಾಗುತ್ತದೆ. ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದವರಿಗೆ ಸಹಾಯಹಸ್ತ ನೀಡುವ ಮೂಲಕ ಮಾನವೀಯತೆ ಮೆರೆಯಬೇಕು ಎಂದರು.

ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಾಚರಣಿಯಂಡ ಪಿ.ಅಪ್ಪಣ್ಣ ಮಾತನಾಡಿ, 9 ದಶಕಗಳ ಹಿಂದೆ ಇಂತಹ ಅನಾಹುತಗಳು ಜಿಲ್ಲೆಯಲ್ಲಿ ಕಂಡುಬಂದಿರುವ ಬಗ್ಗೆ ನೆನಪಿಸಿದರು. ಪ್ರಾಕೃತಿಕ ಸಂಪತ್ತಿಗೆ ಧಕ್ಕೆಯಾಗದಂತೆ ಎಚ್ಚರವಹಿಸುವ ಮೂಲಕ ಸಂಭಾವ್ಯ

ಅನಾಹುತಗಳನ್ನು ತಪ್ಪಿಸಲು ಸಾಧ್ಯ ಎಂದರು.

ಮಹಾ ಆರತಿ ಅಂಗವಾಗಿ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕ ಕೃಷ್ಣಮೂರ್ತಿ ಭಟ್‌ ಅವರು ಕಾವೇರಿಗೆ ಅಷ್ಟೋತ್ತರ, ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಇದೇ ಸಂದರ್ಭ ಕುಶಾಲನಗರದಲ್ಲಿ ನದಿ ಪ್ರವಾಹ ಮತ್ತು ಮಡಿಕೇರಿ, ಸೋಮವಾರಪೇಟೆ ವ್ಯಾಪ್ತಿಯಲ್ಲಿ ನಡೆದ ಭೂಕುಸಿತದಂತಹ ಘಟನೆಗಳು ಮರುಕಳಿಸದಂತೆ ಕೋರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಪಟ್ಟಣ, ಕೊಪ್ಪ ವ್ಯಾಪ್ತಿಯಲ್ಲಿ ನಾನಾ ಬಡಾವಣೆಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಕುಶಾಲನಗರ ಪ.ಪಂ.ಕಾರ್ಮಿಕರನ್ನು ಬಳಗದಿಂದ ಸನ್ಮಾನಿಸಲಾಯಿತು. ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಲಾಯಿತು.

ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ವಿ.ಎನ್‌.ವಸಂತಕುಮಾರ್‌, ಅಯ್ಯಪ್ಪಸ್ವಾಮಿ ದೇವಾಲಯ ಟ್ರಸ್ಟ್‌ ಮಾಜಿ ಅಧ್ಯಕ್ಷ ಕೆ.ಆರ್‌.ಶಿವಾನಂದನ್‌, ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ.ಎನ್‌.ಚಂದ್ರಮೋಹನ್‌, ಡಿ.ಆರ್‌.ಸೋಮಶೇಖರ್‌, ಬಿಜೆಪಿ ನಗರಾಧ್ಯಕ್ಷ ಕೆ.ಜಿ.ಮನು, ಉದ್ಯಮಿಗಳಾದ ವಿ.ಡಿ.ಪುಂಡರೀಕಾಕ್ಷ , ಉಮಾಶಂಕರ್‌ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ