ಆ್ಯಪ್ನಗರ

ಮಡಿಕೇರಿ: ಭಾರಿ ಮಳೆ, ವರ್ಷದಲ್ಲಿ 2ನೇ ಬಾರಿ ಹಾರಂಗಿ ಭರ್ತಿ

ಕಳೆದ ವರ್ಷ ಇದೇ ದಿನ 1298 ಕ್ಯುಸೆಕ್‌ ಒಳಹರಿವು ಇತ್ತು. ನದಿಗೆ 1675 ಮತ್ತು ಕಾಲುವೆಗೆ 1250 ಕ್ಯುಸೆಕ್‌ ನೀರು ಬಿಡಲಾಗುತ್ತಿತ್ತು. ಈಗ ಜಲಾಶಯದಲ್ಲಿ 8.0126 ಟಿಎಂಸಿ ನೀರಿನ ಸಂಗ್ರಹ ಇದೆ. ಕಳೆದ ವರ್ಷ ಇದೇ ದಿನ 8.205 ಟಿಎಂಸಿ ನೀರಿತ್ತು.

Vijaya Karnataka Web 21 Sep 2020, 10:33 pm
ಮಡಿಕೇರಿ: ಕಾವೇರಿ ಕಣಿವೆಯ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹಾರಂಗಿ ಅಣೆಕಟ್ಟೆ ಒಂದೇ ವರ್ಷದಲ್ಲಿ2ನೇ ಬಾರಿ ಭರ್ತಿಯಾಗಿದೆ. ಹಿನ್ನೀರು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗುತ್ತಿದೆ.
Vijaya Karnataka Web ಹಾರಂಗಿ ಜಲಾಶಯ
ಹಾರಂಗಿ ಜಲಾಶಯ


ಹಾಗಾಗಿ 12 ಸಾವಿರ ಕ್ಯುಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಕಾವೇರಿ ಕೊಳ್ಳದಲ್ಲೂ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿಯೂ ತುಂಬಿ ಹರಿಯುತ್ತಿದೆ.

ಆಗಸ್ಟ್‌ ಮೊದಲ ವಾರದಲ್ಲಿ ಸಂಪೂರ್ಣ ಭರ್ತಿಯಾಗಿದ್ದ ಹಾರಂಗಿ ಅಣೆಕಟ್ಟೆ ಇದೀಗ ಮತ್ತೆ ತುಂಬಿದೆ. ಕೊಡಗಿನ ಮಡಿಕೇರಿ, ಕಾಲೂರು, ಹೆಬ್ಬೆಟಗೇರಿ, ಮಕ್ಕಂದೂರು, ಮುಕ್ಕೋಡ್ಲು, ಹಟ್ಟಿಹೊಳೆ, ಹರದೂರು, ಹೇರೂರು ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿದೆ.

ಕೊಡಗು, ಮೈಸೂರು ಹಾಗೂ ಹಾಸನ ಜಿಲ್ಲೆಗಳ ಒಟ್ಟು 1,34,895 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ಹಾರಂಗಿ ಜಲಾಶಯದಿಂದ ನೀರಾವರಿಯ ಅನುಕೂಲತೆ ಇದೆ. ಇಷ್ಟು ಪ್ರದೇಶದಲ್ಲಿಬೆಳೆ ಬೆಳೆಯಲು ವರ್ಷಕ್ಕೆ 15 ಟಿಎಂಸಿ ನೀರು ಬೇಕಾಗುತ್ತದೆ.

8.5 ಟಿಎಂಸಿ ಸಾಮರ್ಥ್ಯದ ಜಲಾಶಯ 2 ಬಾರಿ ಗರಿಷ್ಠ ಪ್ರಮಾಣದಲ್ಲಿ ಭರ್ತಿಯಾದರೆ ಮಾತ್ರ ಅಚ್ಚುಕಟ್ಟು ಪ್ರದೇಶದ ರೈತರು ಸಮೃದ್ಧ ಬೆಳೆ ತೆಗೆಯಲು ಸಾಧ್ಯ. ಹಾಗಾಗಿ ಈ ವರ್ಷ 2ನೇ ಬಾರಿ ಜಲಾಶಯ ತುಂಬಿರುವುದು ರೈತರ ಖುಷಿಗೆ ಕಾರಣವಾಗಿದೆ.

ಸೋಮವಾರದ ಮಾಹಿತಿ ಪ್ರಕಾರ 2859 ಅಡಿ ಎತ್ತರದ ಅಣೆಕಟ್ಟೆಯಲ್ಲಿ2857.56 ಅಡಿ ನೀರಿದೆ. ಕಳೆದ ವರ್ಷ ಇದೇ ದಿನ 2858.13 ಅಡಿಗಳಷ್ಟು ನೀರಿತ್ತು. ಪ್ರಸ್ತುತ 8666 ಕ್ಯುಸೆಕ್‌ ನೀರಿನ ಒಳ ಹರಿವು ಇದ್ದು, ನದಿಗೆ 11,854 ಕ್ಯುಸೆಕ್‌ ಮತ್ತು ಕಾಲುವೆಗೆ 500 ಕ್ಯುಸೆಕ್‌ ನೀರು ಬಿಡಲಾಗುತ್ತಿದೆ.

ಕಳೆದ ವರ್ಷ ಇದೇ ದಿನ 1298 ಕ್ಯುಸೆಕ್‌ ಒಳಹರಿವು ಇತ್ತು. ನದಿಗೆ 1675 ಮತ್ತು ಕಾಲುವೆಗೆ 1250 ಕ್ಯುಸೆಕ್‌ ನೀರು ಬಿಡಲಾಗುತ್ತಿತ್ತು. ಈಗ ಜಲಾಶಯದಲ್ಲಿ 8.0126 ಟಿಎಂಸಿ ನೀರಿನ ಸಂಗ್ರಹ ಇದೆ. ಕಳೆದ ವರ್ಷ ಇದೇ ದಿನ 8.205 ಟಿಎಂಸಿ ನೀರಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ