ಆ್ಯಪ್ನಗರ

ಭಾರಿ ಮಳೆಗೆ ವಿರಾಜಪೇಟೆಯಲ್ಲಿ ಕುಸಿದ ರಸ್ತೆ

ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿದ್ದು, ವಿರಾಜಪೇಟೆಯ ಪೆರುಂಬಾಡಿ ಚೆಕ್ ಪೋಸ್ಟ್ ಬಳಿ ರಸ್ತೆ ಕುಸಿದು ಗುಂಡಿಯಾಗಿದೆ.

ವಿಕ ಸುದ್ದಿಲೋಕ 20 Jul 2017, 11:09 am
ಮಡಿಕೇರಿ: ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿದ್ದು, ವಿರಾಜಪೇಟೆಯ ಪೆರುಂಬಾಡಿ ಚೆಕ್ ಪೋಸ್ಟ್ ಬಳಿ ರಸ್ತೆ ಕುಸಿದು ಗುಂಡಿಯಾಗಿದೆ. ಈ ರಸ್ತೆ ಕೇರಳ ಸಂಪರ್ಕ ಕಲ್ಪಿಸುತ್ತಿದ್ದು ಸಂಪೂರ್ಣ ಬಂದ್ ಆಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
Vijaya Karnataka Web heavy rain in kodagu
ಭಾರಿ ಮಳೆಗೆ ವಿರಾಜಪೇಟೆಯಲ್ಲಿ ಕುಸಿದ ರಸ್ತೆ


ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ತೆರೆದ ಬಾವಿಗಳಲ್ಲಿ ಕೂಡ ನೀರು ಬತ್ತಿ ಮಳೆಗಾಲದಲ್ಲಿಯೂ ಕುಡಿಯುವ ನೀರಿಗಾಗಿ ಬವಣೆ ಪಡುವ ಸ್ಥಿತಿ ನಿರ್ಮಾಣವಾಗಿತ್ತು.ಈಗ ಭಾರಿ ಮಳೆಯಾಗುತ್ತಿದೆ.

ಮಡಿಕೇರಿ, ನಾಪೋಕ್ಲು, ವಿರಾಜಪೇಟೆ, ಗೋಣಿಕೊಪ್ಪ, ಸಿದ್ದಾಪುರ, ಅಮ್ಮತ್ತಿ, ಕುಶಾಲನಗರ, ಸೋಮವಾರಪೇಟೆ, ಶನಿವಾರಸಂತೆ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ