ಆ್ಯಪ್ನಗರ

ಯುವಕನ ಮೇಲೆ ಹಲ್ಲೆ: ಕೊಡಗಿನಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಹಿಂದೂ ಯುವಕರ ಮೇಲಿನ ಹಲ್ಲೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯತಕ್ರರು ಮಡಿಕೇರಿ ಸಮೀಪದ ಕತ್ತೂರು ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

Vijaya Karnataka Web 25 Aug 2019, 2:55 pm
ಕೊಡಗು: ಯುವಕನ ಮೇಲೆ ನಡೆದ ಹಲ್ಲೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯತಕ್ರರು ಮಡಿಕೇರಿ ಸಮೀಪದ ಕತ್ತೂರು ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.
Vijaya Karnataka Web hindu


ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ ಖಂಡಿಸಿ ಪ್ರತಿಭಟನೆ ಮಾಡುತ್ತಿರುವ ಕಾರ್ಯಕರ್ತರು, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಶುಕ್ರವಾರ ಸಂಜೆ ಯತೀಶ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಆದರೆ, ಇಲ್ಲಿಯವರೆಗೂ ಆರೋಪಿಗಳನ್ನು ಬಂಧಿಸದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಶಾಸಕ ಕೆ.ಜಿ ಬೋಪಯ್ಯ, ಗ್ರಾಮಾಂತರ ಠಾಣಾಧಿಕಾರಿ ಚೇತನ್, ಎಸ್ ಐ ಅನೂಪ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ