ಆ್ಯಪ್ನಗರ

ಕುಶಾಲನಗರ: ಜನ ಜೀವನ ಅಸ್ತವ್ಯಸ್ತ

ಕುಶಾಲನಗರ, ಕೂಡಿಗೆ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

Vijaya Karnataka 12 Jul 2018, 5:00 am
ಕುಶಾಲನಗರ: ಕುಶಾಲನಗರ, ಕೂಡಿಗೆ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
Vijaya Karnataka Web in kushalanagara life affected
ಕುಶಾಲನಗರ: ಜನ ಜೀವನ ಅಸ್ತವ್ಯಸ್ತ


ಹಾರಂಗಿಯಿಂದ ಹೆಚ್ಚುವರಿ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ನದಿ ಹಾಗೂ ಕಾವೇರಿ ನದಿ ಸಂಗಮ ಪ್ರದೇಶ ವ್ಯಾಪ್ತಿ ಮುಳುಗಡೆಗೊಳ್ಳುತ್ತಿದೆ. ಕಣಿವೆಯ ರಾಮಲಿಂಗೇಶ್ವರ ದೇವಾಲಯ ಮೆಟ್ಟಿಲುಗಳು ನೀರಿನಿಂದ ಆವೃತವಾಗಿದೆ. ತುಂಬಿ ಹರಿಯುತ್ತಿರುವ ನದಿ ನೀರು ದೇವಾಲಯದ 20 ಮೆಟ್ಟಿಲುಗಳ ಎತ್ತರಕ್ಕೆ ಏರಿಕೆಯಾಗಿದೆ. ಅಲ್ಲದೇ, ನದಿ ತಟದ ಗದ್ದೆಗಳು ಜಲಾವೃತಗೊಳ್ಳುತ್ತಿವೆ. ಹಾರಂಗಿಯಿಂದ ಹುದುಗೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದ್ದು ಸೇತುವೆ ಮೇಲೆ ನೀರು ಹರಿಯುತ್ತಿರುವ ದೃಶ್ಯ ಕಂಡುಬಂತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ