ಆ್ಯಪ್ನಗರ

ಜಿಲ್ಲಾದ್ಯಂತ ಕಾರ್ಗಿಲ್‌ ವಿಜಯೋತ್ಸವ

ಯೋಧರ ನಾಡು ಕೊಡಗಿನಲ್ಲಿ ಸಂಭ್ರಮದಿಂದ ಕಾರ್ಗಿಲ್‌ ವಿಜಯೋತ್ಸವವನ್ನು ಆಚರಿಸಲಾಯಿತು. ವಿಶ್ವ ಹಿಂದು ಪರಿಷತ್‌, ಭಜರಂಗದಳ, ಲಯನ್ಸ್‌ ಸಂಸ್ಥೆ ಸೇರಿದಂತೆ ವಿವಿಧ ಸಂಘಟನೆಗಳಿಂದ, ಶಾಲಾ-ಕಾಲೇಜುಗಳ ವತಿಯಿಂದ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು.

Vijaya Karnataka 27 Jul 2019, 5:00 am
ಮಡಿಕೇರಿ : ಯೋಧರ ನಾಡು ಕೊಡಗಿನಲ್ಲಿ ಸಂಭ್ರಮದಿಂದ ಕಾರ್ಗಿಲ್‌ ವಿಜಯೋತ್ಸವವನ್ನು ಆಚರಿಸಲಾಯಿತು. ವಿಶ್ವ ಹಿಂದು ಪರಿಷತ್‌, ಭಜರಂಗದಳ, ಲಯನ್ಸ್‌ ಸಂಸ್ಥೆ ಸೇರಿದಂತೆ ವಿವಿಧ ಸಂಘಟನೆಗಳಿಂದ, ಶಾಲಾ-ಕಾಲೇಜುಗಳ ವತಿಯಿಂದ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು.
Vijaya Karnataka Web MDK-MDK26JAY9


ಕಾಲೇಜು ಶಿಕ್ಷ ಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್‌ ರಿಬ್ಬನ್‌ ಕ್ಲಬ್‌, ಯೂತ್‌ ರೆಡ್‌ಕ್ರಾಸ್‌ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಚಿತ್ರಾ.ವೈ ಅಧ್ಯಕ್ಷ ತೆವಹಿಸಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಧನಂಜಯ ಅಗೋಳಿಕಜೆ, ಪ್ರತಿಯೊಬ್ಬರಲ್ಲೂ ದೇಶಭಕ್ತಿ, ರಾಷ್ಟ್ರಪ್ರೇಮ ಇರಬೇಕು, ಪ್ರತಿಯೊಬ್ಬರೂ ಅಭಿವೃದ್ಧಿಯತ್ತ ಚಿಂತನೆ ಮಾಡಿದಾಗ ರಾಷ್ಟ್ರವೂ ಅಭಿವೃದ್ಧಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ರಾಷ್ಟ್ರಭಕ್ತಿ, ರಾಷ್ಟ್ರಪ್ರೇಮ ಇರಬೇಕು. ಕಾರ್ಗಿಲ್‌ ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರನ್ನು ಸದಾ ಸ್ಮರಿಸಿಕೊಳ್ಳುವಂತಾಗಬೇಕು ಎಂದರು.

ಕಾರ್ಗಿಲ್‌ ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರ ಒಂದೊಂದು ಬದುಕು ರೋಚಕವಾಗಿದೆ. ಯೋಧರು ಗಡಿ ಕಾಯುವುದರಿಂದ ನಾವುಗಳು ನೆಮ್ಮದಿಯ ಬದುಕು ಸಾಗಿಸಲು ಸಾಧ್ಯವಾಗಿದೆ. ರಾಷ್ಟ್ರದ ಸುರಕ್ಷ ತೆ, ಭದ್ರತೆ ಕಾಯುವಲ್ಲಿ ಸೈನಿಕರ ಪಾತ್ರ ಮಹತ್ತರವಾಗಿದೆ. ಪ್ರಪಂಚದ ಯಾವುದೇ ದೇಶದಲ್ಲಿ ಭಾರತದ ಕಾರ್ಗಿಲ್‌ ಅಂತಹ ರಣರಂಗವಿರಲಾರದು ಎಂದ ಅವರು, ಪ್ರಾಣದ ಹಂಗನ್ನು ತೊರೆದು ದೇಶಕ್ಕಾಗಿ ಪ್ರಾಣಾರ್ಪಾಣೆ ಮಾಡಿದ ವೀರ ಯೋಧರನ್ನು ಸ್ಮರಿಸಿದರು.

ಭೀಕರ ರಣರಂಗದಲ್ಲಿ ನಮ್ಮ ದೇಶದ ವೀರ ಸೇನಾನಿಗಳ ಪ್ರಾಣಾರ್ಪಣೆಯ ಫಲವಾಗಿ ಜೀವನ ನಡೆಸುತ್ತಿದ್ದೇವೆ. ಅಂತಹ ವೀರರನ್ನು ನೆನೆಯುವುದು ಭಾರತೀಯರಾದ ನಮ್ಮ ಕರ್ತವ್ಯ. ಎಲ್ಲಾ ಯುವ ಸಮೂಹ ಇಂದು ದೇಶಾಭಿಮಾನವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ದಯಾನಂದ.ಕೆ.ಸಿ. ಪ್ರಾಸ್ತಾವಿಕವಾಗಿ ಮಾತನಾಡಿ, ಯುವ ಜನರಲ್ಲಿ ದೇಶಾಭಿಮಾನ ಕುಸಿಯುತ್ತಿದೆ. ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಪ್ರೇಮದ ಅರಿವು ಮೂಡಿಸುವುದು ಅನಿವಾರ್ಯ. ಎಲ್ಲಾ ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಸಹಾಯಕ ಪ್ರಾಧ್ಯಾಪಕ ಪ್ರಕಾಶ್‌ ಮಾತನಾಡಿ, ದೇಶಕ್ಕಾಗಿ ಹಲವು ಸೈನಿಕರು ಹೋರಾಟ ಮಾಡಿ ವೀರ ಮರಣವನ್ನಪ್ಪಿದ್ದಾರೆ. ಇವರನ್ನು ಸದಾ ಸ್ಮರಿಸಬೇಕಿದೆ ಎಂದು ಹೇಳಿದರು.

ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಘವೇಂದ್ರ ಪ್ರಸಾದ್‌ ಇತರರು ಇದ್ದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕ ಪ್ರವೀಣ್‌ ನಿರೂಪಿಸಿದರು. ಆಕೇಶ ಸ್ವಾಗತಿಸಿದರು. ಶಿವ ಪ್ರಾರ್ಥಿಸಿ, ರೋಷನ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ