ಆ್ಯಪ್ನಗರ

ಭಾಗಮಂಡಲದಲ್ಲಿ ಪಿಂಡ ಪ್ರದಾನದ ಬಗ್ಗೆ ಚರ್ಚಿಸಿ ನಿರ್ಧಾರ: ಕೋಟಾ ಶ್ರೀನಿವಾಸ ಪೂಜಾರಿ

ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಭಾಗಮಂಡಲದಲ್ಲಿ ಪಿಂಡ ಪ್ರದಾನ ಕಾರ್ಯ ಮುಂದುವರಿಸುವ ಕುರಿತು ಚಚಿ೯ಸಿ ತೀಮಾ೯ನ ಕೈಗೊಳ್ಳಲಾಗುವುದು ಎಂದು ರಾಜ್ಯ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Vijaya Karnataka Web 24 Jun 2020, 4:30 pm
ಮಡಿಕೇರಿ: ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಭಾಗಮಂಡಲದಲ್ಲಿ ಪಿಂಡ ಪ್ರದಾನ ಮಾಡುವುದನ್ನು ಮುಂದುವರಿಸುವ ಕುರಿತು ಆರೋಗ್ಯ ಇಲಾಖೆಯೊಂದಿಗೆ ಚಚಿ೯ಸಿ ಅಂತಿಮ ತೀಮಾ೯ನ ಕೈಗೊಳ್ಳಲಾಗುವುದು ಎಂದು ರಾಜ್ಯ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
Vijaya Karnataka Web kota srinivas poojary


ಮಡಿಕೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಸಚಿವರು ಹೇಳಿಕೆ ನೀಡಿದರು. ಸಂಪ್ರದಾಯ, ಕಟ್ಟುಪಾಡುಗಳನ್ನು ಪಾಲಿಸುವುದು ಅಗತ್ಯ. ಹಾಗೇ ಆರೋಗ್ಯದ ಮುನ್ನೆಚ್ಚರಿಕೆಯನ್ನೂ ಪರಿಶೀಲಿಸಬೇಕಾಗುತ್ತದೆ. ಲಾಕ್ ಡೌನ್ ನಿಂದಾಗಿ ರಾಜ್ಯದ ದೇವಾಲಯಗಳಿಗೆ ಶೇ.30 ರಷ್ಟು ಆದಾಯ ಕುಸಿತವಾಗಿದೆ. ಕೊಲ್ಲೂರು ದೇವಾಲಯ ಒಂದರಲ್ಲಿಯೇ ತಿಂಗಳಿಗೆ 8 ಕೋಟಿ ರೂಪಾಯಿ ಆದಾಯ ಬರುತ್ತಿತ್ತು. ಕೊರೊನಾದಿಂದಾಗಿ ದೇವಾಲಯಗಳ ವರಮಾನಕ್ಕೂ ಧಕ್ಕೆಯಾಗಿದೆ ಎಂದು ಹೇಳಿದರು.

ಕೊರೊನಾ ಲಾಕ್‌ಡೌನ್‌ ನಂತರ ಭಾಗಮಂಡಲದಲ್ಲಿ ಪಿಂಡ ಪ್ರದಾನ ಮೊದಲಾದ ಧಾರ್ಮಿಕ ಕಾರ್ಯಗಳನ್ನು ನಿಲ್ಲಿಸಲಾಗಿತ್ತು. ಸತ್ತವರಿಗೆ ಪಿಂಡ ಪ್ರದಾನ ಮಾಡುವುದು ಕೊಡವ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಲಾಕ್ ಡೌನ್ ಸಡಿಲಗೊಂಡಿದ್ದು, ಈ ಕ್ರಿಯೆಗೆ ಭಾಗಮಂಡಲದಲ್ಲಿ ಅವಕಾಶ ನೀಡುವಂತೆ ಒತ್ತಡ ಉಂಟಾಗಿದೆ.

ಎಸ್ಸೆಸ್ಸೆಲ್ಸಿ ಎಗ್ಸಾಂ ಬರೆಯಲಾಗದ ಕಂಟೇನ್ಮೆಂಟ್ ಝೋನ್‌ ವಿದ್ಯಾರ್ಥಿಗಳಿಗೆ ಆಗಸ್ಟ್‌ನಲ್ಲಿ ಮತ್ತೊಂದು ಅವಕಾಶ‌!

ಕೊಡಗಿನಲ್ಲಿ ಮತ್ಸ್ಯ ಕೇಂದ್ರ ಸ್ಥಾಪನೆ!
ಕೊಡಗಿನಲ್ಲಿ ಮೀನುಗಾರಿಕೆ ಅಭಿವೖದ್ದಿಗಾಗಿ ವಿವಿಧ ಯೋಜನೆ ಕೈಗೊಳ್ಳಲಾಗುವುದು. ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕಾ ಕೇಂದ್ರ ತೆರೆಯಲಾಗುತ್ತದೆ ಎಂದು ಸಚಿವರು ಘೋಷಣೆ ಮಾಡಿದರು.

ಅಚ್ಚರಿ ತಂದ ತೈಲಬೆಲೆ! ದಿಲ್ಲಿಯಲ್ಲಿ ಪೆಟ್ರೋಲ್‌ಗಿಂತಲೂ ತುಟ್ಟಿಯಾದ ಡೀಸೆಲ್!

ಕೊಡಗಿನಲ್ಲಿ ಮೀನುಗಾರಿಕೆ ಮತ್ತು ಮುಜರಾಯಿ ಇಲಾಖೆ ಸಾಧನೆ ತೖಪ್ತಿಕರವಾಗಿದೆ. ಭಾಗಮಂಡಲದಲ್ಲಿ ಮೇಲ್ಸೇತುವೆ ಕಾಮಗಾರಿ ಎರಡು ವಷ೯ಗಳಿಂದ ಪ್ರಗತಿಯಲ್ಲಿರುವ ಯೋಜನೆಯಾಗಿದೆ. ಮುಂದಿನ ತಿಂಗಳು ಟೆಂಡರ್ ಕರೆದು ತ್ವರಿತಗತಿಯ ಚಾಲನೆ ನೀಡಲಾಗುತ್ತದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ