ಆ್ಯಪ್ನಗರ

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ ತೀರ್ಮಾನ 2-3 ದಿನಗಳಲ್ಲಿ ಪ್ರಕಟ; ಎಸ್ ಟಿ ಸೋಮಶೇಖರ್

ಕೊರೊನಾ ಕಾರಣದಿಂದ ರೈತರ ಸಾಲ ಮರುಪಾವತಿ ಅವಧಿಯನ್ನು ಎರಡರಿಂದ ಮೂರು ತಿಂಗಳುಗಳ ಕಾಲ ವಿಸ್ತರಣೆ ಮಾಡಲಾಗುವುದು ಎಂದು ಸಹಕಾರಿ ಸಚಿವ ಎಸ್‌ಟಿ ಸೋಮಶೇಖರ್ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಅವರು ಈ ಕುರಿತಾಗಿ ಮಾತನಾಡಿದ್ದಿಷ್ಟು.

Vijaya Karnataka Web 2 Jul 2020, 4:38 pm
ಮಡಿಕೇರಿ: ಜೂನ್ 30 ಕ್ಕೆ ರೈತರ ಸಾಲ ವಾಪಸ್ ಕೊಡಲು ಕೊನೇ ದಿನಾಂಕವಿತ್ತು. ಇನ್ನೂ ಡಿಸೆಂಬರ್ ವರೆಗೆ ಮರುಪಾವತಿ ಮಾಡುವಂತೆ ಆಗ್ರಹಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಇನ್ನು 2-3 ದಿನಗಳಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.
Vijaya Karnataka Web st shomashekar


ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಹಕಾರ ಇಲಾಖೆ ವತಿಯಿಂದ ಕೊರೊನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರಿಗೆ ತಲಾ 3000 ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮಕ್ಕೆ ಚೆಕ್ ನೀಡುವ ಮೂಲಕ ಚಾಲನೆ ನೀಡಿ ಸಚಿವರು ಮಾತನಾಡಿದರು.

ಹೆಚ್ಚುತ್ತಿರುವ ಕೊರೊನಾ ಸೋಂಕು: ಕೊಡಗಿನಲ್ಲಿ ಸ್ವಯಂ ಲಾಕ್‌ಡೌನ್‌

ಕೋವಿಡ್ ಪರಿಸ್ಥಿತಿ ಇನ್ನೂ ಮುಂದುವರಿದಿರುವ ಕಾರಣ ಸಾಲ ಮರುಪಾವತಿ ಅವಧಿಯನ್ನು ವಿಸ್ತರಣೆ ಮಾಡಬೇಕೆಂಬ ಬಗ್ಗೆ ರೈತರಿಂದ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜೊತೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.

ರೈತರಿಗೆ 20 ಸಾವಿರ ಕೋಟಿ ರೂ. ಸಾಲ ನೀಡುವ ಗುರಿ; ಕೇಂದ್ರಕ್ಕೆ ಮನವಿ

ಕಳೆದ ವರ್ಷ ರೈತರಿಗೆ 13,500 ಕೋಟಿ ರೂಪಾಯಿ ಸಾಲ ಕೊಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ನಬಾರ್ಡ್ ನಿಂದ ಹೆಚ್ಚುವರಿ ಒಂದು ಸಾವಿರ ಕೋಟಿ ರೂಪಾಯಿ ಲಭಿಸಿರುವುದರಿಂದ ಈ ಬಾರಿ 14,500 ಕೋಟಿ ರೂಪಾಯಿ ಸಾಲ ನೀಡಲು ಚಾಲನೆ ಕೊಟ್ಟಿದ್ದೇವೆ. ಎಲ್ಲ ರೈತರಿಗೂ ಸಂಪೂರ್ಣವಾಗಿ ಸಾಲ ಸಿಗಬೇಕು ಎಂಬ ದೃಷ್ಟಿಯಿಂದ ಮುಂದಿನ ಸಾಲಿನಲ್ಲಿ 20 ಸಾವಿರ ಕೋಟಿ ರೂಪಾಯಿ ಸಾಲದ ವ್ಯವಸ್ಥೆ ಮಾಡಬೇಕು. ಈ ಸಂಬಂಧ ಕೇಂದ್ರದ ಗಮನ ಸೆಳೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳ ಬಳಿಯೂ ಮನವಿ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.

ಆಶಾ ಕಾರ್ಯಕರ್ತೆಯರಿಗೆ ಶೀಘ್ರ ಸಾಲ

ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಭದ್ರತೆ ಕೊಡುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಚಿಂತನೆ ನಡೆಯುತ್ತಿದೆ. ಸ್ವಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳ ಮಾದರಿ ಸಾಲ ನೀಡುವ ಸಂಬಂಧ ಈಗಾಗಲೇ ಸರ್ಕಾರದ ಮಟ್ಟದಲ್ಲಿ 2-3 ಸುತ್ತಿನ ಸಭೆಗಳು ನಡೆದಿದ್ದು, ಶೀಘ್ರದಲ್ಲಿಯೇ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ