ಆ್ಯಪ್ನಗರ

ನಿಲುವಾಗಿಲು: ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಕೊಡ್ಲಿಪೇಟೆ ಸಮೀಪದ ಬೆಸೂರು ಗ್ರಾ.ಪಂ. ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಗ್ರಾಮ ಸ್ವರಾಜ್ಯ ಅಭಿಯಾನದಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ 2 ವರ್ಷದಿಂದ 6 ವರ್ಷದ ಒಳಗಿನ ಮಕ್ಕಳಿಗೆ ಇಂದ್ರಧನುಷ್‌ ಮರು ಲಸಿಕೆ ಕಾರ್ಯಕ್ರಮ ನಡೆಯಿತು.

Vijaya Karnataka 25 May 2018, 5:00 am
ಶನಿವಾರಸಂತೆ: ಕೊಡ್ಲಿಪೇಟೆ ಸಮೀಪದ ಬೆಸೂರು ಗ್ರಾ.ಪಂ. ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಗ್ರಾಮ ಸ್ವರಾಜ್ಯ ಅಭಿಯಾನದಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ 2 ವರ್ಷದಿಂದ 6 ವರ್ಷದ ಒಳಗಿನ ಮಕ್ಕಳಿಗೆ ಇಂದ್ರಧನುಷ್‌ ಮರು ಲಸಿಕೆ ಕಾರ್ಯಕ್ರಮ ನಡೆಯಿತು.
Vijaya Karnataka Web niluvagilu vaccination program inagurated
ನಿಲುವಾಗಿಲು: ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ


ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ನೀಲೇಶ್‌, ಆರೋಗ್ಯ ಇಲಾಖೆ ಗ್ರಾಮ ಸ್ವರಾಜ್ಯ ಅಭಿಯಾನದಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ 2 ವರ್ಷದಿಂದ 6 ವರ್ಷದ ಒಳಗಿನ ಮಕ್ಕಳಿಗೆ ಬರುವ ವಿವಿಧ ಮಾರಕರೋಗ ತಡೆಗಟ್ಟಲು ಇಂದ್ರಧನುಷ್‌ ಸಂಸ್ಥೆಯ ಸಹಕಾರದಿಂದ ಮರು ಲಸಿಕೆ ಕಾರ್ಯಕ್ರಮಹಮ್ಮಿಕೊಳ್ಳುತ್ತಿದೆ. ಅದರಂತೆ ಕೊಡಗು ಜಿಲ್ಲೆಯಲ್ಲಿ ಕೊಡ್ಲಿಪೇಟೆ ವ್ಯಾಪ್ತಿಯ ಬೆಸೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಶೇ.50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ 2 ವರ್ಷದಿಂದ 6 ವರ್ಷದ ಒಳಗಿನ ಮಕ್ಕಳು ಇರುವುದು ಆರೋಗ್ಯ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಗೊತ್ತಾಗಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಲಸಿಕೆ ಕಾರ್ಯಕ್ರಮದಿಂದ ಮಕ್ಕಳಿಗೆ ಬರಬಹುದಾದ ನಾನಾ ಮಾರಕ ರೋಗಗಳನ್ನು ತಡೆಗಟ್ಟಬಹುದು. ಇದರ ಜತೆಯಲ್ಲಿ ಶಿಶು ಮರಣವನ್ನು ತಪ್ಪಿಸುವ ಗುರಿ ಆರೋಗ್ಯ ಇಲಾಖೆಯದ್ದಾಗಿದೆ ಎಂದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ರವಿಕುಮಾರ್‌ ಮಾತನಾಡಿ, ಪ್ರತಿ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು. ಇದರಿಂದ ಮಕ್ಕಳಿಗೆ ಎದುರಾಗುವ ಮಾರಕ ರೋಗಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಮಕ್ಕಳ ಆರೋಗ್ಯದ ಕಡೆಗೆ ಪೋಷಕರು ಗಮನಹರಿಸುವುದೊಂದಿಗೆ ಮಕ್ಕಳಿಗೆ ಶಿಕ್ಷ ಣ ನೀಡಲು ಹೆಚ್ಚಿನ ಒತ್ತು ನೀಡುವಂತೆ ಸಲಹೆ ನೀಡಿದರು.

ತಾಲೂಕು ಆರೋಗ್ಯ ಶಿಕ್ಷ ಣಾಧಿಕಾರಿ ಎಚ್‌.ಕೆ. ಶಾಂತಿ ಕಾರ್ಯಕ್ರಮ ಉದ್ದೇಶದ ಕುರಿತು ಮಾಹಿತಿ ನೀಡಿದರು. ಹಿರಿಯ ಆರೋಗ್ಯ ಸಹಾಯಕಿ ದಮಯಂತಿ, ಆರೋಗ್ಯ ಸಹಾಯಕಿಯರಾದ ಸುಶೀಲಾ, ಇಂದಿರಾ, ಮಂಜುಳಾ, ಜಯಂತಿ, ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯ ನಿರೀಕ್ಷ ಕ ವಿನಯ್‌ ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ