ಆ್ಯಪ್ನಗರ

ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಸಹಕರಿಸಿ

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯುವುದು ಸೇರಿದಂತೆ ಯಾವುದೇ ರೀತಿಯ ಅಪಾರಾಧಗಳನ್ನು ತಡೆಯುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸುಮನ್‌ ಡಿ.ಪೆನ್ನೇಕರ್‌ ತಿಳಿಸಿದರು.

Vijaya Karnataka 8 Dec 2018, 5:00 am
ಮಡಿಕೇರಿ: ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯುವುದು ಸೇರಿದಂತೆ ಯಾವುದೇ ರೀತಿಯ ಅಪಾರಾಧಗಳನ್ನು ತಡೆಯುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸುಮನ್‌ ಡಿ.ಪೆನ್ನೇಕರ್‌ ತಿಳಿಸಿದರು.
Vijaya Karnataka Web MDK-mdk7jay2


ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆ, ಮಕ್ಕಳ ವಿಶೇಷ ಪೊಲೀಸ್‌ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷ ಣಾ ಘಟಕದಿಂದ ಈಚæಗೆ ನಗರದ ಪೊಲೀಸ್‌ ಕ್ಯಾಂಟಿನ್‌ ಮೇಲಿನ ಸಭಾಂಗಣದಲ್ಲಿ ನಡೆದ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ, ರಕ್ಷ ಣೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ತಡೆ ಕುರಿತು ಅರಿವು ಕಾರ್ಯಾಗಾರದಲ್ಲಿ ಮಾತನಾಡಿದರು.

ಪೊಲೀಸ್‌ ಇಲಾಖೆಯಲ್ಲಿ ಪ್ರತೀ ಡಿಸೆಂಬರ್‌ ತಿಂಗಳನ್ನು ಅಪರಾಧ ತಡೆ ಮಾಸಾಚರಣೆಯಾಗಿ ಆಚರಿಸುತ್ತಾ ಬಂದಿದ್ದು, ಈ ಬಾರಿ ಜಿಲ್ಲೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಕಾರ‍್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ‍್ಯದರ್ಶಿಗಳು ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ನೂರುನ್ನಿಸ ಮಾತನಾಡಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಮಹಿಳೆಯರ ಮತ್ತು ಮಕ್ಕಳ ರಕ್ಷ ಣೆಗೆ ಇರುವಂತಹ ಕಾರ್ಯಕ್ರಮಗಳು ಮತ್ತು ದೌರ್ಜನ್ಯಕ್ಕೆ ಒಳಗಾದಾಗ ನೀಡುವ ಪರಿಹಾರದ ಕುರಿತು ಮಾಹಿತಿ ನೀಡಿದರು.

ಸಂತ್ರಸ್ತ ಪರಿಹಾರ ಕಾಯ್ದೆ 2011ರ ನೂತನ ತಿದ್ದುಪಡಿ ಅನ್ವಯ ಮಹಿಳೆಯರ ಮೇಲೆ ಯಾವುದೇ ದೌರ್ಜನ್ಯ ನಡೆದ ಸಂದರ್ಭದಲ್ಲಿ ಪೊಲೀಸ್‌ ಠಾಣೆಗೆ ದೂರು ಸ್ವೀಕಾರವಾದ ಕೂಡಲೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತರಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಇದರ ಅನ್ವಯ ಮಧ್ಯಂತರ ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನೀಡಲಾಗುವುದು ಎಂದು ತಿಳಿಸಿದರು.

ಪ್ರಥಮ ಮಾಹಿತಿ ವರದಿ ಬಂದ ತಕ್ಷ ಣ ಸಂತ್ರಸ್ತರಿಗೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಇರುವಂತಹ ನೆರವು ಕುರಿತು ತಿಳಿಸಲು ಎಲ್ಲಾ ಪೊಲೀಸ್‌ ಠಾಣಾ ಅಧಿಕಾರಿಗಳು ಗಮನ ಹರಿಸಬೇಕು. ಆ ನಿಟ್ಟಿನಲ್ಲಿ ಸಂತ್ರಸ್ತರಿಗೆ ಇದರ ಬಗ್ಗೆ ಅರಿವು ಮೂಡಿಸಿ ಸಂತ್ರಸ್ತರ ಪರಿಹಾರ ತಿದ್ದುಪಡಿ ಕಾಯಿದæ 2011ರ ಅನ್ವಯ ಸಿಗುವಂತಹ ಪರಿಹಾರವನ್ನು ಸಂತ್ರಸ್ತರಿಗೆ ತಲುಪಿಸಲು ಪೊಲೀಸ್‌ ಇಲಾಖೆಯ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ಪೋಕ್ಸೋ ಕಾಯಿದæ, ಕೌಟುಂಬಿಕ ದೌರ್ಜನ್ಯ ತಡೆ ಕಾಯಿದæ ಕುರಿತು ಹಲವು ಮಾಹಿತಿಯನ್ನು ಕಾರ್ಯಾಗಾರದಲ್ಲಿ ನೀಡಿದರು. ಜಿಪಂ ಸಿಇಒ ಕೆ.ಲಕ್ಷ್ಮಿಪ್ರಿಯ ಮಾತನಾಡಿ, ಪೊಲೀಸ್‌ ಕಾಯಿದೆಯಲ್ಲಿ ಕಾಲ ಕಾಲಕ್ಕೆ ಆಗುವಂತಹ ತಿದ್ದುಪಡಿಗಳನ್ನು ಇಲಾಖೆ ಅಧಿಕಾರಿಗಳು ತಿಳಿದುಕೊಂಡು ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಜವಾಬ್ದಾರಿಯುತವಾಗಿ ಮಹಿಳೆಯರ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವಂತವಾಗಬೇಕು ಎಂದರು.

ಉಪ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಸುಂದರರಾಜ್‌, ನಾಗಪ್ಪ, ವಕೀಲರು ಹಾಗೂ ಆಂತರಿಕ ದೂರು ಸಮಿತಿ ಅಧ್ಯಕ್ಷ ಕೆ.ಎಂ.ಮೀನಾಕುಮಾರಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಸೂರಜ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಸ್ವಾಮಿ, ಜಿಲ್ಲಾ ಮಕ್ಕಳ ರಕ್ಷ ಣಾಧಿಕಾರಿ ಮಮ್ತಾಜ್‌, ಪೊಲೀಸ್‌ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಡಿವೈಎಸ್‌ಪಿ ಸುಂದರರಾಜ್‌ ಸ್ವಾಗತಿಸಿದರು. ಪೊಲೀಸ್‌ ಇಲಾಖೆಯ ಎನ್‌.ಕುಮಾರಿ ಪ್ರಾರ್ಥಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಜಯಪ್ಪ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ