ಆ್ಯಪ್ನಗರ

ಕುಶಾಲನಗರ ಪಿಯು ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ

ರಸಾಯನಶಾಸ್ತ್ರ ವಿಷಯದ ಉಪನ್ಯಾಸಕರ ನೇಮಕ್ಕೆ ಆಗ್ರಹಿಸಿ ಕುಶಾಲನಗರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ವಿಕ ಸುದ್ದಿಲೋಕ 23 Jul 2016, 4:16 am
ಕುಶಾಲನಗರ: ರಸಾಯನಶಾಸ್ತ್ರ ವಿಷಯದ ಉಪನ್ಯಾಸಕರ ನೇಮಕ್ಕೆ ಆಗ್ರಹಿಸಿ ಕುಶಾಲನಗರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
Vijaya Karnataka Web pu students boycott class kushalnagar
ಕುಶಾಲನಗರ ಪಿಯು ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ

ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರಾಂಶುಪಾಲರ ವಿರುದ್ಧ ಘೋಷಣೆ ಕೂಗಿದರು. ಕಾಲೇಜು ಪ್ರಾರಂಭವಾಗಿ ಎರಡು ತಿಂಗಳಾದರೂ ರಸಾಯನಶಾಸ್ತ್ರ ಉಪನ್ಯಾಸಕರು ಇಲ್ಲದೆ, ಯಾವುದೇ ಪಾಠಗಳು ಇನ್ನೂ ಪ್ರಾರಂಭವಾಗಿಲ್ಲ. ಈ ಬಗ್ಗೆ ಪ್ರಾಂಶುಪಾಲರನ್ನು ಕೇಳಿದರೆ ಇಂದು, ನಾಳೆ ಎಂದು ಕಾಲ ಕಳೆಯುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಇಲ್ಲಿಗೆ ಸಮೀಪದ ಗ್ರಾಮಾಂತರ ಕಾಲೇಜು ಗಳಲ್ಲಿ ತಲಾ 4-8 ವಿದ್ಯಾರ್ಥಿಗಳು ಇದ್ದರೂ ಖಾಯಂ ಉಪನ್ಯಾಸಕರಿದ್ದಾರೆ. ಆದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸುಮಾರು 800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಈ ಸಂಸ್ಥೆಯಲ್ಲಿ ರಸಾಯನಶಾಸ್ತ್ರ ವಿಷಯಕ್ಕೆ ಉಪನ್ಯಾಸಕರನ್ನು ನೇಮಿಸದೇ ಬೇಜವಾಬ್ದಾರಿ ಪ್ರದರ್ಶಿಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಉಪನ್ಯಾಸಕರನ್ನು ನೇಮಿಸದಿದ್ದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿಯವರೆಗೆ ತರಗತಿಗಳನ್ನು ಬಹಿಷ್ಕರಿಸುತ್ತೇವೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.

ನಮ್ಮಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಉಪನ್ಯಾಸಕರು ಜೂನ್ 1 ರಿಂದ 6 ತಿಂಗಳವರೆಗೆ ಹರಿಗೆ ರಜೆ ತೆರಳಿದ್ದಾರೆ. ಬದಲಿ ವ್ಯವಸ್ಥೆ ಮಾಡುವುದು ಅನಿವಾರ‌್ಯವಾಗಿದ್ದು, ಮೇಲಧಿಕಾರಿಗೆ ಮನವಿ ಮಾಡಿದ್ದೇವೆ. ಆದರೆ, ಇದುವರೆಗೆ ಯಾವುದೇ ಉಪನ್ಯಾಕರು ಬಾರದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಅತಿಥಿ ಉಪನ್ಯಾಕರನ್ನು ನೇಮಿಸಿಕೊಳ್ಳಲಾಗುವುದು. ಈ ಬಗ್ಗೆ ಕಾಲೇಜು ಅಭಿವೃದ್ದಿ ಸಮಿತಿಯೊಂದಿಗೆ ಚರ್ಚಿಸಲಾಗಿದೆ. -ಸತೀಶ್, ಕಾಲೇಜಿನ ಪ್ರಾಂಶುಪಾಲರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ