ಆ್ಯಪ್ನಗರ

ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆಗೆ ಒತ್ತಾಯ

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದಿಂದ ಡಿ.1 ರಂದು ನಗರದ ಗಾಂಧಿ ಮೈದಾನದಲ್ಲಿ ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹ ತಿಳಿಸಿದ್ದಾರೆ.

Vijaya Karnataka 24 Nov 2018, 9:36 pm
ಮಡಿಕೇರಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದಿಂದ ಡಿ.1 ರಂದು ನಗರದ ಗಾಂಧಿ ಮೈದಾನದಲ್ಲಿ ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹ ತಿಳಿಸಿದ್ದಾರೆ.
Vijaya Karnataka Web rama mandir
ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆಗೆ ಒತ್ತಾಯ


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಸ್ವತಂತ್ರ ಭಾರತದಲ್ಲಿ ಏಳು ದಶಕಗಳಿಂದ ಶ್ರೀ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ಹೋರಾಟ ನಡೆದಿದೆ. ಸ್ವಾತಂತ್ರ್ಯಪೂರ್ವದಲ್ಲೂ ಈ ಹಿನ್ನೆಲೆ ಹೋರಾಟ, ಬಲಿದಾನಗಳು ನಡೆಯುತ್ತಿದೆ. ಹೀಗಿದ್ದರೂ 28 ವರ್ಷಗಳಿಂದ ರಾಮ ಮಂದಿರದ ಕನಸು ನನಸಾಗಲಿದೆ ಎಂಬ ಹಿಂದೂಗಳ ಕನಸು ಹುಸಿಯಾಗಿದೆ. ಹೀಗಾಗಿ ಬಹುಕೋಟಿ ಹಿಂದೂಗಳ ಧಾರ್ಮಿಕ ಭಾವನೆಯೊಂದಿಗೆ ಶ್ರೀರಾಮನ ಭಕ್ತಿಯ ಪ್ರತೀಕ ಭವ್ಯ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ರಾಷ್ಟ್ರವ್ಯಾಪಿ ಆಂದೋಲನ ಆರಂಭವಾಗಿದೆ. ಈ ಹಿನ್ನೆಲೆ ಕೊಡಗಿನಲ್ಲಿಯೂ ಜನಾಗ್ರಹ ಸಭೆ ಆಯೋಜಿಸಲಾಗಿದೆ. ಆ ಮೂಲಕ ದೇಶದ ಸಂಸದರ ಗಮನ ಸೆಳೆಯುದರೊಂದಿಗೆ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಸಹಮತದ ನಿರ್ಣಯದೊಂದಿಗೆ ಸುಗ್ರೀವಾಜ್ಞೆ ಜಾರಿಗೊಳಿಸಲು ಜನಾಗ್ರಹ ಸಭೆ ಮೂಲಕ ಒತ್ತಾಯಿಸಲಾಗುವುದು,'' ಎಂದು ಮಾಹಿತಿ ನೀಡಿದರು.

''ಅಂದು ಮಡಿಕೇರಿಯಲ್ಲಿ ಬನ್ನಿಮಂಟಪ ಬಳಿಯಿಂದ ಮಧ್ಯಾಹ್ನ 2.30 ಗಂಟೆಗೆ ದೇವರ ಕಲಾಕೃತಿಯ ಮಂಟಪಗಳ ಮೆರವಣಿಗೆ ಗಾಂಧಿ ಮೈದಾನದವರೆಗೆ ನಡೆಯಲಿದೆ. ದಿಕ್ಸೂಚಿ ಭಾಷಣವನ್ನು ಉಡುಪಿಯ ಗುರುಪುರದ ವಜ್ರದೇಹಿ ಆಶ್ರಮದ ರಾಜಶೇಖರಾನಂದ ಸ್ವಾಮೀಜಿ ನೀಡಲಿದ್ದು, ಕೊಡಗಿನ ಎಲ್ಲ ಮಠದ ಸಾಧು ,ಸಂತರು ಭಾಗವಹಿಸಿ ಆರ್ಶೀವಚನ ನೀಡಲಿದ್ದಾರೆ,'' ಎಂದು ತಿಳಿಸಿದರು.

ಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‌ನ ಕಾರ್ಯಾಧ್ಯಕ್ಷ ಐ.ಎಂ. ಅಪ್ಪಯ್ಯ, ಬಜರಂಗದಳದ ಜಿಲ್ಲಾ ಸಂಯೋಜಕ ಕೆ.ಎಚ್‌. ಚೇತನ್‌, ಮಡಿಕೇರಿ ನಗರ ಸಂಯೋಜಕ ಮನು ರೈ, ಜಿಲ್ಲಾ ವಿದ್ಯಾರ್ಥಿ ಪ್ರಮುಖ ವಿನಯ್‌ ಹಾಗೂ ಜಿಲ್ಲಾ ಸೇವಾ ಪ್ರಮುಖ ಪಿ.ಜಿ ಕಮಲ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ