ಆ್ಯಪ್ನಗರ

ಹಳೆಯದಾದ ವಿದ್ಯುತ್‌ ಕಂಬ ಬದಲಿಸಿ

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ ವತಿಯಿಂದ ಕುಶಾಲನಗರದ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಉಪ ವಿಭಾಗದ ಕಚೇರಿ ಆವರಣದಲ್ಲಿ ಜನಸಂಪರ್ಕ ಸಭೆ ನಡೆಯಿತು.

Vijaya Karnataka 19 Jun 2019, 9:02 pm
ಕುಶಾಲನಗರ
Vijaya Karnataka Web remove old electric polls
ಹಳೆಯದಾದ ವಿದ್ಯುತ್‌ ಕಂಬ ಬದಲಿಸಿ


ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ ವತಿಯಿಂದ ಕುಶಾಲನಗರದ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಉಪ ವಿಭಾಗದ ಕಚೇರಿ ಆವರಣದಲ್ಲಿ ಜನಸಂಪರ್ಕ ಸಭೆ ನಡೆಯಿತು.

ಕೊಡಗು-ಚಾಮರಾಜನಗರ ವೃತ್ತದ ಅಧೀಕ್ಷ ಕ ಎಂಜಿನಿಯರ್‌ ಮಹದೇವಸ್ವಾಮಿ ಪ್ರಸಾದ್‌ ಅವರ ಅಧ್ಯಕ್ಷ ತೆಯಲ್ಲಿ ನಡೆದ ಸಭೆಯಲ್ಲಿ ಕುಶಾಲನಗರ ನಾಗರಿಕ ದೇವರಾಜು ಮಾತನಾಡಿ, ಬೈಚನಹಳ್ಳಿಯಲ್ಲಿ ವಿದ್ಯುತ್‌ ಕಂಬಗಳು ವಾಲಿದ್ದು, ಇವುಗಳನ್ನು ಸರಿಪಡಿಸುವಲ್ಲಿ ಇಲಾಖೆ ನಿರ್ಲಕ್ಷ ್ಯ ಧೋರಣೆ ತೋರಿದೆ. ಆದಷ್ಟು ಬೇಗನೆ ಸಮಸ್ಯೆಯನ್ನು ಪರಿಹರಿಸಿಕೊಡಬೇಕು. ಕಿರಿದಾದ ರಸ್ತೆಯಲ್ಲಿ ಹೊಸದಾಗಿ ಮನೆ ನಿರ್ಮಿಸಿದವರಿಗೆ ಭೂ ಅಂತರದಿಂದ ವಿದ್ಯುತ್‌ ಸಂಪರ್ಕ ಕಲ್ಪಿಸುವ ವ್ಯವಸ್ಥೆಯನ್ನು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಸದಸ್ಯರಾದ ಗಣೇಶ್‌ ಮಾತನಾಡಿ, ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಹಳೆಯ ವಿದ್ಯುತ್‌ ಕಂಬಗಳನ್ನು ಬದಲಾಯಿಸಬೇಕು ಎಂದರು.

ಮುಳ್ಳುಸೋಗೆ ಗ್ರಾಮದ ನಿವಾಸಿ ಪುಲಿಯಂಡ ಚಂಗಪ್ಪ, ಮುಳ್ಳುಸೋಗೆ ಹಾಗೂ ಗೋಪಾಲ್‌ ಸರ್ಕಲ್‌ಗಳಲ್ಲಿ ಟ್ರಾನ್ಸ್‌ಫಾರ್ಮರ್‌ಗಳು ಗಾಳಿಗೆ ವಾಲಿದ್ದು, ಮುಂದಾಗಲಿರುವ ಅನಾಹುತಗಳನ್ನು ತಪ್ಪಿಸಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಕೂಡಿಗೆಯ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಮಾಜಿ ನಿರ್ದೇಶಕ ಕೆ.ಕೆ.ನಾಗರಾಜ್‌ ಶೆಟ್ಟಿ ಮಾತನಾಡಿ, ಇಪ್ಪತ್ತು ವರ್ಷಗಳಿಂದ ಅಳವಡಿಸಿರುವ ವಿದ್ಯುತ್‌ ಸರಬರಾಜಿಗೆ ಎಳೆದಿರುವ ಲೈನ್‌ ತಂತಿಗಳು ತುಕ್ಕು ಹಿಡಿದಿದ್ದು, ಗಾಳಿ ಮಳೆಗೆ ತುಂಡಾಗಿ ಬೀಳುತ್ತಿರುವ ಹಲವು ಪ್ರಸಂಗಗಳು ನಡೆಯುತ್ತಿವೆ. ಇವುಗಳನ್ನು ಕೂಡಲೇ ಬದಲಾಯಿಸುವ ಕೆಲಸಕ್ಕೆ ಮುಂದಾಗಬೇಕು. ಈಗಾಗಲೇ ಗ್ರಾಮಾಂತರ ಪ್ರದೇಶದಲ್ಲಿ ಅಳವಡಿಸಿರುವ ಟ್ರಾನ್ಸ್‌ ಫಾರ್ಮರ್‌ಗಳಿಂದ ಎರಡು, ಮೂರು ಕಿ.ಮೀಗಳವರೆಗೆ ವಿದ್ಯುತ್‌ನ ಅಂತರವನ್ನು ವಿಸ್ತರಿಸಿದ್ದು, ಇದರಿಂದಾಗಿ ಆ ವ್ಯಾಪ್ತಿಯ ಗ್ರಾಮಸ್ಥರಿಗೆ ಸಮರ್ಪಕವಾಗಿ ವಿದ್ಯುತ್‌ ಸಿಗುತ್ತಿಲ್ಲ. ಪದೇಪದೆ ವಿದ್ಯುತ್‌ ಕಡಿತಗೊಳ್ಳುತ್ತಿದೆ. ಇದರ ಬದಲಾಗಿ ಒಂದು ಟ್ರಾನ್ಸ್‌ಫಾರ್ಮರ್‌ ನಿಂದ ಒಂದು ಕಿ.ಮೀ ವ್ಯಾಪ್ತಿ ಮಾತ್ರ ನೀಡುವಂತೆ ಮನವಿ ಮಾಡಿದರು. ಗಂಗಾ ಕಲ್ಯಾಣ ಯೋಜನೆಯಡಿ ಕಳೆದ ವರ್ಷದಿಂದ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿಯಿರುವ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಸಭೆಯಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾವಲುಪಡೆಯ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಮಾತನಾಡಿ ಮುಂದಿನ ದಿನಗಳಲ್ಲಿ ಜನಸಂಪರ್ಕ ಸಭೆ ಮಾಹಿತಿಯನ್ನು ಎಲ್ಲ ಗ್ರಾಮಗಳಿಗೂ ತಿಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಾರ್ವಜನಿಕರ ಮನವಿಗಳನ್ನು ಕೂಲಂಕಷವಾಗಿ ಆಲಿಸಿದ ಅಧೀಕ್ಷ ಕ ಎಂಜಿನಿಯರ್‌ ಮಹದೇವ್‌ ಸ್ವಾಮಿ ಪ್ರಸಾದ್‌ ಅವರು , ಸ್ಥಳದಲ್ಲಿದ್ದ ಅಧಿಕಾರಿಗಳಿಗೆ 15 ದಿನದೊಳಗೆ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭ ಕಾರ್ಯಪಾಲಕ ಎಂಜಿನಿಯರ್‌ ಸೋಮಶೇಖರ್‌, ಸಹಾಯಕ ಕಾರ್ಯನಿರ್ವಹಣಾ ಎಂಜಿನಿಯರ್‌ ಅಶೋಕ್‌ ಸೇರಿದಂತೆ ನಿಗಮದ ಅಧಿಕಾರಿಗಳು ಹಾಗೂ ಕುಶಾಲನಗರ ಹೋಬಳಿ ವ್ಯಾಪ್ತಿಯ ಜನರು ಇದ್ದರು.

ಜನ ಸಂಪರ್ಕ ಸಭೆಯಲ್ಲಿ ಬೆರಳೆಣಿಕೆ ಮಂದಿ ಜನರು ಉಪಸ್ಥಿತರಿದ್ದು, ಇದು ನಿಗಮದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ