ಆ್ಯಪ್ನಗರ

ಸುಪ್ರೀಂ ಆದೇಶ ಮರುಪರಿಶೀಲನೆಗೆ ಆಗ್ರಹ

ಆದಿವಾಸಿ ಜನಾಂಗದವರನ್ನು ಅರಣ್ಯ ಪ್ರದೇಶದಿಂದ ತೆರವುಗೊಳಿಸಬೇಕೆಂಬ ಆದೇಶವನ್ನು ಸುಪ್ರೀಂಕೋರ್ಟ್‌ ಮರು ಪರಿಶೀಲಿಸಿ ಬುಡಕಟ್ಟು ಜನರಿಗೆ ನ್ಯಾಯ ಒದಗಿಸಬೇಕಿದೆ ಎಂದು ಬುಡಕಟ್ಟು ಕೃಷಿಕರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಆರ್‌.ಕೆ.ಚಂದ್ರ ಆಗ್ರಹಿಸಿದ್ದಾರೆ.

Vijaya Karnataka 27 Mar 2019, 5:00 am
ಕುಶಾಲನಗರ
Vijaya Karnataka Web review supreme order demanded
ಸುಪ್ರೀಂ ಆದೇಶ ಮರುಪರಿಶೀಲನೆಗೆ ಆಗ್ರಹ


ಆದಿವಾಸಿ ಜನಾಂಗದವರನ್ನು ಅರಣ್ಯ ಪ್ರದೇಶದಿಂದ ತೆರವುಗೊಳಿಸಬೇಕೆಂಬ ಆದೇಶವನ್ನು ಸುಪ್ರೀಂಕೋರ್ಟ್‌ ಮರು ಪರಿಶೀಲಿಸಿ ಬುಡಕಟ್ಟು ಜನರಿಗೆ ನ್ಯಾಯ ಒದಗಿಸಬೇಕಿದೆ ಎಂದು ಬುಡಕಟ್ಟು ಕೃಷಿಕರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಆರ್‌.ಕೆ.ಚಂದ್ರ ಆಗ್ರಹಿಸಿದ್ದಾರೆ.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಸಾವಿರಾರು ವರ್ಷಗಳಿಂದ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನರು ನಿಜವಾದ ಅರಣ್ಯ ರಕ್ಷ ಕರು. ಆದರೆ ಢೋಂಗಿ ಪರಿಸರವಾದಿಗಳ ತಪ್ಪು ಮಾಹಿತಿಯಿಂದ ಸುಪ್ರೀಂಕೋರ್ಟ್‌ ನೀಡಿದ ಆದೇಶ ಅರಣ್ಯವಾಸಿಗಳಿಗೆ ಆಘಾತ ಉಂಟುಮಾಡಿದೆ. ಕೊಡಗಿನಲ್ಲೇ ಹುಟ್ಟಿ ಬೆಳೆದ ಆದಿವಾಸಿಗಳು ನೆಲೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ದೇಶ ಬಿಟ್ಟು ಭಾರತಕ್ಕೆ ಬಂದ ಟಿಬೇಟಿಯನ್ನರು ಯಾವುದೇ ಆತಂಕವಿಲ್ಲದೆ ನಮ್ಮ ರಾಜ್ಯದಲ್ಲಿ ಜೀವನ ನಡೆಸುತ್ತಿರಬೇಕಾದರೆ ಅರಣ್ಯದಲ್ಲೇ ಹುಟ್ಟಿ ಬೆಳೆದ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದು ಎಷ್ಟರ ಮಟ್ಟಿಗೆ ಸರಿ?,'' ಎಂದು ಅವರು ಪ್ರಶ್ನಿಸಿದರು.

'' ಸರಕಾರಗಳು ಅರಣ್ಯ ಪ್ರದೇಶದಲ್ಲಿ ಜಂಗಲ್‌ ಲಾಡ್ಜ್‌ ಮತ್ತು ವಸತಿ ಗೃಹಗಳು ನಿರ್ಮಿಸಿ ಪ್ರವಾಸಿಗರಿಗೆ ತಂಗಲು ಅವಕಾಶ ಕಲ್ಪಿಸುವಾಗ ನಿಜವಾದ ಅರಣ್ಯ ರಕ್ಷ ಕರನ್ನು ಯಾವ ನೈತಿಕತೆ ಮೇಲೆ ಕಾಡಿನಿಂದ ಹೊರಗಟ್ಟುತ್ತಿದ್ದಾರೆ. ಕಾಡಿಗೆ ಬೆಂಕಿ ಬೀಳುವ ಸಂದರ್ಭ ಅರಣ್ಯ ಇಲಾಖೆಯೊಂದಿಗೆ ಸಹಕಾರ ನೀಡಿ ಬೆಂಕಿ ನಂದಿಸುವ ಕಾರ್ಯ ಅರಣ್ಯ ವಾಸಿಗಳಿಂದ ನಡೆದುಕೊಂಡು ಬರುತ್ತಿದೆ. ಅರಣ್ಯ ಸಂಪತ್ತು, ವನ್ಯ ಮೃಗಗಳಿಗೆ ಯಾವುದೇ ರೀತಿಯ ಹಾನಿಯುಂಟು ಮಾಡದೆ ಅರಣ್ಯ ಉತ್ಪನ್ನಗಳನ್ನು ಅವಲಂಬಿಸಿ ಜೀವನ ನಡೆಸುತ್ತಿರುವ ಬುಡಕಟ್ಟು ಜನರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು,'' ಎಂದರು.

''ಅರಣ್ಯ ವಾಸಿಗಳು ಈ ಸಮಸ್ಯೆಯನ್ನು ಕಂಡೂ ಕಾಣದಂತೆ ಮೌನವಹಿಸಿರುವ ಜನಪ್ರತಿನಿಧಿಗಳು ಯಾವುದೇ ಕಾರಣಕ್ಕೂ ಮತ ಕೇಳಲು ಹಾಡಿಗಳಿಗೆ ಆಗಮಿಸಬಾರದು. ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುವ ಬಗ್ಗೆಯೂ ಚಿಂತನೆ ಹರಿಸಲಾಗಿದೆ,'' ಎಂದು ಅವರು ತಿಳಿಸಿದರು.

''ಸರಕಾರ ಬುಡಕಟ್ಟು ಜನರಿಗೆ ಮೀಸಲು ಕಲ್ಪಿಸಿ ಎಂಎಲ್‌ಎ, ಎಂಎಲ್ಸಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಒದಗಿಸಬೇಕಿದೆ,'' ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಬುಡಕಟ್ಟು ಕೃಷಿಕರ ಸಂಘದ ಸದಸ್ಯರಾದ ನಂಜರಾಯಪಟ್ಟಣ ಗ್ರಾಪಂ ಸದಸ್ಯ ಜೆ.ಸಿ.ತಮ್ಮಯ್ಯ, ಯಡವನಾಡು ರವಿ, ಕಟ್ಟೆಹಾಡಿ ಅಪ್ಪು, ಮೀನುಕೊಲ್ಲಿ ಕೃಷ್ಣ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ