ಆ್ಯಪ್ನಗರ

ಸೋಮವಾರಪೇಟೆ: ದಾಳಿಗೆ ಖಂಡನೆ

ಹಾಸನದಲ್ಲಿ ಶಾಸಕರ ಮನೆ ಮತ್ತು ಬಿಜೆಪಿ ಕಾರ್ಯಕರ್ತರ ಮೇಲಿನ ದಾಳಿ ಪ್ರಕರಣವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Vijaya Karnataka 15 Feb 2019, 5:00 am
ಸೋಮವಾರಪೇಟೆ: ಹಾಸನದಲ್ಲಿ ಶಾಸಕರ ಮನೆ ಮತ್ತು ಬಿಜೆಪಿ ಕಾರ್ಯಕರ್ತರ ಮೇಲಿನ ದಾಳಿ ಪ್ರಕರಣವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web somwarpete attack condemned
ಸೋಮವಾರಪೇಟೆ: ದಾಳಿಗೆ ಖಂಡನೆ


ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ರೇವಣ್ಣ ಅವರಿಗೆ ಹಾಸನದಲ್ಲಿ ಬಿಜೆಪಿಯ ಪ್ರೀತಂ ಗೌಡ ಅವರ ಗೆಲುವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ಮುಂದುವರಿದ ಭಾಗವಾಗಿ ಜೆಡಿಎಸ್‌ನ ಕಾರ್ಯಕರ್ತರ ಸೋಗಿನಲ್ಲಿರುವ ಗೂಂಡಾಗಳು ಶಾಸಕರ ಮನೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತಕ್ಷ ಣ ಹಲ್ಲೆ ನಡೆಸಿದ ಗೂಂಡಾಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ, ಮುಖ್ಯಮಂತ್ರಿ ಮತ್ತು ಎಲ್ಲ ಮಂತ್ರಿಗಳ ಮನೆ ಎದುರು ಯುವ ಮೋರ್ಚಾದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸುನೀಲ್‌ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್‌, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ತಂಗಮ್ಮ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ