ಆ್ಯಪ್ನಗರ

ದಿಡ್ಡಳ್ಳಿಯಲ್ಲಿ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಸಿದ್ಧತೆ

ದಿಡ್ಡಳ್ಳಿ ಅರಣ್ಯ ಪ್ರದೇಶದಲ್ಲಿ ತಾತ್ಕಾಲಿಕವಾಗಿ ವಾಸವಿರುವ ಬುಡಕಟ್ಟು ಜನಾಂಗದವರಿಗೆ ಮೂಲ ಸೌಕರ್ಯ ಕಲ್ಪಿಸುವ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ ಕುಟುಂಬಗಳ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚಿಸಿದ್ದಾರೆ.

ವಿಕ ಸುದ್ದಿಲೋಕ 25 Dec 2016, 5:15 am
ಮಡಿಕೇರಿ: ದಿಡ್ಡಳ್ಳಿ ಅರಣ್ಯ ಪ್ರದೇಶದಲ್ಲಿ ತಾತ್ಕಾಲಿಕವಾಗಿ ವಾಸವಿರುವ ಬುಡಕಟ್ಟು ಜನಾಂಗದವರಿಗೆ ಮೂಲ ಸೌಕರ್ಯ ಕಲ್ಪಿಸುವ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ ಕುಟುಂಬಗಳ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚಿಸಿದ್ದಾರೆ.
Vijaya Karnataka Web the district facility to accommodate up diddalliyalli
ದಿಡ್ಡಳ್ಳಿಯಲ್ಲಿ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಸಿದ್ಧತೆ


ದಿಡ್ಡಳ್ಳಿ ನಿರಾಶ್ರೀತರಿಗೆ ಮೂಲ ಸೌಲಭ್ಯ ಕಲ್ಪಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂಗನವಾಡಿ, ಶಾಲೆ ಇತರೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ನಿರ್ದೇಶನ ನೀಡಿದೆ. ಇದರಂತೆ ಅಧಿಕಾರಿಗಳು ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು. ಜತೆಗೆ ಮೂಲ ನಿವಾಸಿ ಕುಟುಂಬಗಳ ಬಗೆಗಿನ ಮಾಹಿತಿ ಸಂಗ್ರಹ ಅಗತ್ಯವಾಗಿದ್ದು, ಪಡಿತರ ಚೀಟಿ, ಆಧಾರ್ ಕಾರ್ಡ್ ಮತ್ತಿತರ ಅಗತ್ಯ ಪೂರಕ ದಾಖಲೆಗಳನ್ನು ಪಡೆದು ಅಗತ್ಯ ಸೌಲಭ್ಯವನ್ನು ಕಲ್ಪಿಸುವಂತೆ ಸೂಚಿಸಿದರು.

ಜಾಗ ಗುರುತಿಸಿ: ಮೂಲ ನಿವಾಸಿ ಗಿರಿಜನರಿಗೆ ನಿವೇಶನ ಕಲ್ಪಿಸಲು ಜಾಗ ಗುರುತಿಸುವ ಕೆಲಸ ಆಗಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಯಲ್ಲಿ ಸರಕಾರಿ ಜಾಗ ಇಲ್ಲದಿದ್ದಲ್ಲಿ ಖಾಸಗಿ ಜಾಗ ಪಡೆಯುವಲ್ಲಿ ಮಾಹಿತಿ ಕಲೆ ಹಾಕುವ ಕೆಲಸ ಮಾಡಬೇಕು. ಈ ಬಗ್ಗೆ ತಹಸೀಲ್ದಾರ್ ಹಾಗೂ ಇಒ ಕೂಡಲೇ ಕ್ರಮ ಕೈಗೊಂಡು ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ತಂಡ ರಚಿಸಿ: ದಿಡ್ಡಳ್ಳಿಯಲ್ಲಿ ಆಹಾರ ಪೂರೈಕೆ, ಕುಡಿಯುಲು ನೀರು ಮತ್ತು ಶೌಚಾಲಯ ಒದಗಿಸಿರುವ ಬಗ್ಗೆ ಪರಿಶೀಲನೆ ನಡೆಸಿ ಗಿರಿಜನರ ಬೇಡಿಕೆಗೆ ಅನುಸಾರವಾಗಿ ಹೆಚ್ಚುವರಿಯಾಗಿ ಶೌಚಾಲಯ ಹಾಗೂ ಸ್ನಾನದ ಗಹ ನಿರ್ಮಾಣ ಮತ್ತು ನೀರಿನ ಟ್ಯಾಂಕ್‌ಗಳನ್ನು ನಿರ್ಮಿಸಬೇಕು. ಆಹಾರ ಸಾಮಗ್ರಿಗಳ ಪೂರೈಕೆ ಇನ್ನಿತರ ತುರ್ತು ಅಗತ್ಯತೆಗಳನ್ನು ಪೂರೈಸುವಲ್ಲಿ ಅಧಿಕಾರಿಗಳ ತಂಡ ರಚಿಸಿ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಹೇಳಿದರು.

ಪಡಿತರ ವ್ಯವಸ್ಥೆ ಹಾಗೂ ಪೌಷ್ಟಿಕ ಆಹಾರ ಯೋಜನೆಯಡಿ ಈಗಾಗಲೇ ಆಹಾರ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ತಿಂಗಳಿಗೆ ಕುಟುಂಬದವರಿಗೆ ಬೇಕಾಗುವಷ್ಟು ಆಹಾರವನ್ನು ಹಾಗೂ ಸ್ಥಳೀಯ ಆಹಾರ ಪೂರೈಕೆ ಸಂಸ್ಥೆಯಿಂದ ಗುಣಮಟ್ಟದ ಆಹಾರವನ್ನು ಪೂರೈಸುವಲ್ಲಿ ಕ್ರಮಕೈಗೊಳ್ಳುವುದು, ಹಾಗೆಯೇ ಆರೋಗ್ಯ ಸೌಲಭ್ಯವನ್ನು ಕಲ್ಪಿಸಬೇಕಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾದಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ, ನಿರಾಶ್ರಿತರ ನೋಂದಣಿ ಕಾರ‌್ಯವನ್ನು ಮಾಡುವಲ್ಲಿ ಅಧಿಕಾರಿಗಳು ಗಿರಿಜನರ ಮನವೊಲಿಸುವ ಪ್ರಯತ್ನ ಮಾಡಬೇಕು. ನೋಂದಣಿ ಕಾರ್ಯದಿಂದ ಆಗುವ ಉಪಯೋಗವನ್ನು ಗಿರಿಜನರಿಗೆ ತಿಳಿಸುವಂತೆ ಆಗಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರರು, ಇಒ ಹಾಗೂ ಸ್ಥಳೀಯ ಕಂದಾಯ ಪರಿವೀಕ್ಷಕರು ಕ್ರಮವಹಿಸಿ ಮಾಹಿತಿ ಪಡೆಯುವಂತೆ ಹೇಳಿದರು.

ಗಿರಿಜನರ ಬೇಡಿಕೆ ಅನುಸಾರ ಉತ್ತಮ ಆಹಾರ ಧಾನ್ಯ ಪೂರೈಕೆ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ತಿಳಿಯಬೇಕು. ಅಲ್ಲದೆ ಪರಿಶೀಲನೆ ನಡೆಸುವುದು ಅಗತ್ಯವಾಗಿದೆ. ಗ್ರಾಮ ಪಂಚಾಯಿತಿಯಿಂದ ಕುಡಿಯುವ ನೀರಿನ ಪೈಪುಗಳ ಅಳವಡಿಕೆ ಹಾಗೂ ನೀರಿನ ಹೆಚ್ಚಿನ ಅವಶ್ಯಕತೆ ಇದ್ದಲ್ಲಿ ನೀರಿನ ಟ್ಯಾಂಕರುಗಳ ಮೂಲಕ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಪೋಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಮೈಸೂರು ಸಮಗ್ರ ಗಿರಿಜನ ಅಭಿವದ್ಧಿ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ಐಟಿಡಿಪಿ ಅಧಿಕಾರಿ ಮಾಯಾದೇವಿ ಗಲಗಲಿ, ವಿರಾಜಪೇಟೆ ತಹಸೀಲ್ದಾರ್ ಮಹದೇವಸ್ವಾಮಿ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ