ಆ್ಯಪ್ನಗರ

ಈ ಆಸ್ಪತ್ರೆಯಲ್ಲೇ ಸಾವು ಕಮ್ಮಿ: ಕೋಲಾರ ಜಿಲ್ಲಾಸ್ಪತ್ರೆ ಡೀನ್‌

ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಸ್ಪತ್ರೆಗೆ ಬಿಜೆಪಿ ನಾಯಕರು ಭೇಟಿ ನೀಡಿದ್ದು, ಡೀನ್‌ ಮತ್ತು ಬಿಜೆಪಿ ನಾಯಕರ ಮಧ್ಯೆ ಮಾತಿಗೆ ಮಾತು ಬೆಳೆಯಿತು.

Vijaya Karnataka Web 24 Aug 2017, 4:08 pm
ಕೋಲಾರ : ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಸ್ಪತ್ರೆಗೆ ಬಿಜೆಪಿ ನಾಯಕರು ಭೇಟಿ ನೀಡಿದ್ದು, ಡೀನ್‌ ಮತ್ತು ಬಿಜೆಪಿ ನಾಯಕರ ಮಧ್ಯೆ ಮಾತಿಗೆ ಮಾತು ಬೆಳೆಯಿತು.
Vijaya Karnataka Web bjp leaders visit kolar hospital
ಈ ಆಸ್ಪತ್ರೆಯಲ್ಲೇ ಸಾವು ಕಮ್ಮಿ: ಕೋಲಾರ ಜಿಲ್ಲಾಸ್ಪತ್ರೆ ಡೀನ್‌


ಆಸ್ಪತ್ರೆಯಲ್ಲಿ ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದರು. ಆಗ ಡೀನ್‌ ಶಿವಕುಮಾರ್‌ ಅವರು ರಾಜ್ಯದಲ್ಲೇ ಅತಿ ಕಡಿಮೆ ಸಾವಿರುವ ಆಸ್ಪತ್ರೆ ಇದು ಎಂದು ಸಮರ್ಥನೆ ಮಾಡಿಕೊಂಡರು.

ಸಂಸದ ಪಿಸಿ ಮೋಹನ್, ಶಾಸಕ ಸುರೇಶ್ ಕುಮಾರ್, ಭಾರತಿ ಶೆಟ್ಟಿ, ಅಶ್ವಥ್ ನಾರಾಯಣ್, ವೈ ರಾಮಕ್ಕ ಹಾಗೂ ಇತರ ಬಿಜೆಪಿ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆಸ್ಪತ್ರೆಯಲ್ಲಿನ ಐಸಿಯು ಘಟಕ, ವೀಕ್ಷಣೆ ನಡೆಸಿ ವೈದ್ಯ ಶಿವಕುಮಾರ್ ಅವರಿಂದ ಮಾಹಿತಿ ಪಡೆದರು.

ನರಸಿಂಹರಾಜ ಜಿಲ್ಲಾಸ್ಪತ್ರೆಯಲ್ಲಿ (ಎಸ್‌ಎನ್‌ಆರ್‌) ನಡೆದ ಶಿಶುಗಳ ಸರಣಿ ಸಾವಿನ ಕುರಿತಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಕ್ಷೇನಾ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಅವರು ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ತೂಕ ಮತ್ತು ಮೆದುಳಿನ ಬೆಳವಣಿಗೆಯ ಕೊರತೆಯಿಂದಾಗಿ ಕಳೆದ ಮೂರು ದಿನಗಳಿಂದ 3 ಮಕ್ಕಳು ಸಾವನ್ನಪ್ಪಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಮಕ್ಕಳು ಮೃತಪಟ್ಟಿಲ್ಲವೆಂದು ಡಾ.ಶಿವಕುಮಾರ್‌ ಬುಧವಾರ ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ