ಆ್ಯಪ್ನಗರ

ವೈದ್ಯರ ಮುಷ್ಕರಕ್ಕೆ ಜಿಲ್ಲೆಯಲ್ಲೂ ಬೆಂಬಲ

ಪಶ್ಚಿಮ ಬಂಗಾಳದಲ್ಲಿ ನಡೆದಿರುವ ವೈದ್ಯರ ಮೇಲಿನ ದೌರ್ಜನ್ಯ ಖಂಡಿಸಿ ಜೂ.17ರಂದು ರಾಷ್ಟ್ರಾದ್ಯಂತ ಕರೆ ನೀಡಿರುವ 24 ಗಂಟೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜಿಲ್ಲಾ ಘಟಕ ಮುಷ್ಕರದಲ್ಲಿ ಭಾಗವಹಿಸಲಿದೆ.

Vijaya Karnataka 17 Jun 2019, 10:40 pm
ಕೋಲಾರ : ಪಶ್ಚಿಮ ಬಂಗಾಳದಲ್ಲಿ ನಡೆದಿರುವ ವೈದ್ಯರ ಮೇಲಿನ ದೌರ್ಜನ್ಯ ಖಂಡಿಸಿ ಜೂ.17ರಂದು ರಾಷ್ಟ್ರಾದ್ಯಂತ ಕರೆ ನೀಡಿರುವ 24 ಗಂಟೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜಿಲ್ಲಾ ಘಟಕ ಮುಷ್ಕರದಲ್ಲಿ ಭಾಗವಹಿಸಲಿದೆ.
Vijaya Karnataka Web district support for doctors strike
ವೈದ್ಯರ ಮುಷ್ಕರಕ್ಕೆ ಜಿಲ್ಲೆಯಲ್ಲೂ ಬೆಂಬಲ


ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ಹೊರತುಪಡಿಸಿ ಸರಕಾರಿ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಐಎಂಎ ಕರೆಯ ಮೇರೆಗೆ ಜಿಲ್ಲೆಯಲ್ಲೂ ತುರ್ತು ಸೇವೆ ಹಾಗೂ ಅಪಘಾತ ವಿಭಾಗ ಹೊರತುಪಡಿಸಿ ಒಪಿಡಿ ಇನ್ನಿತರೆ ಎಲ್ಲ ವೈದ್ಯಕೀಯ ಸೇವೆಗಳನ್ನು ಬೆಳಗ್ಗೆ 6ರಿಂದ ಜೂ.18ರ ಬೆಳಗ್ಗೆ 6ರವರೆಗೆ ಹಿಂತೆಗೆದುಕೊಳ್ಳಲಾಗಿದೆ.

ಬೆಳಗ್ಗೆ 11 ಗಂಟೆಗೆ ನಗರದ ಬಂಗಾರಪೇಟೆ ವೃತ್ತದಲ್ಲಿರುವ ಸಂಘದ ಕಚೇರಿಯಲ್ಲಿ ಸಭೆ ಸೇರಿ ವೈದ್ಯರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಲಾಗುವುದು ಎಂದು ಐಎಂಎ ಜಿಲ್ಲಾ ಘಟಕದ ಅಧ್ಯಕ್ಷ ಡಾ. ನಾರಾಯಣಸ್ವಾಮಿ ತಿಳಿಸಿದ್ದಾರೆ.

ಮುಷ್ಕರದ ಕುರಿತು ಮಾತನಾಡಿರುವ ಡಿಎಚ್‌ಒ ಡಾ.ಎಸ್‌.ಎನ್‌.ವಿಜಯ್‌ಕುಮಾರ್‌, ಸರಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ. ಯಾರೂ ರಜೆಯ ಮೇಲೆ ತೆರಳಬಾರದೆಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ